ಬುಧವಾರ, ಆಗಸ್ಟ್ 4, 2021
21 °C

ಹೊಸಪೇಟೆಯಲ್ಲಿ ಮತ್ತೆ ಆರು ಜನಕ್ಕೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರದಲ್ಲಿ ಮತ್ತೆ ಆರು ಜನಕ್ಕೆ ಕೋವಿಡ್‌–19 ಇರುವುದು ಭಾನುವಾರ ಸಂಜೆ ದೃಢಪಟ್ಟಿದೆ.

ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಒಟ್ಟು 23 ಜನ ಸೋಂಕಿತರಲ್ಲಿ ಈಗಾಗಲೇ 14 ಜನ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆ ಸೇರಿದ್ದಾರೆ.

ಹೊಸದಾಗಿ ಸೋಂಕು ದೃಢಪಟ್ಟಿರುವವರಲ್ಲಿ ಇಬ್ಬರು ಗಂಡು, ನಾಲ್ವರು ಹೆಣ್ಣು ಮಕ್ಕಳು ಸೇರಿದ್ದಾರೆ. ಈ ಪೈಕಿ ರಾಣಿಪೇಟೆಯ 16 ವರ್ಷದ ಹುಡಗಿ ಚೆನ್ನೈನಿಂದ ಹಿಂತಿರುಗಿದ್ದಾರೆ. ಅವರಿಗೆ ಅಲ್ಲಿಯೇ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಕಾರಿಗನೂರು, ಎಸ್‌.ಆರ್‌. ನಗರ, ದೇವಾಂಗಪೇಟೆ, ಎಂ.ಜೆ. ನಗರ ಹಾಗೂ ಗಾಂಧಿ ನಗರದ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಯಾರ ಸಂಪರ್ಕದಿಂದ ಸೋಂಕು ಹರಡಿತು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ. ಜತೆಗೆ ಇವರ ಸಂಪರ್ಕಕ್ಕೆ ಬಂದವರ ವಿವರ ಕಲೆ ಹಾಕಲಾಗುತ್ತಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು