ಗುರುವಾರ , ಜುಲೈ 16, 2020
24 °C

ಸ್ಟಾಫ್ ನರ್ಸ್‌ಗೆ ಕೋವಿಡ್ ದೃಢ | ಗಣಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 21

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಬಳ್ಳಾರಿ ಕೋವಿಡ್ ಆಸ್ಪತ್ರೆಯ ಪುರುಷ ಸ್ಟಾಫ್ ನರ್ಸ್‌ಗೆ ಸೋಮವಾರ ತಡರಾತ್ರಿ ಕೋವಿಡ್ -19 ದೃಢಪಟ್ಟಿದ್ದು, ಗಣಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 21ಕ್ಕೆ‌ ಏರಿದೆ.

ಸೋಮವಾರ ಮೂವರಿಗೆ ಸೋಂಕು ತಗುಲಿತ್ತು. ಒಟ್ಟು ಸೋಂಕಿತರ ಸಂಖ್ಯೆ 37 ಆಗಿದ್ದು, 15 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ.

ಸ್ಟಾಫ್ ನರ್ಸ್ ಅನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಅವರ ಗಂಟಲು ದ್ರವದ ಪರೀಕ್ಷಾ ವರದಿ ಸೋಮವಾರ ರಾತ್ರಿ ಕೈಸೇರಿದ್ದು, ಸೋಂಕಿರುವುದು ದೃಢಪಟ್ಟಿದೆ.

ಪಿಪಿಇ ಕಿಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳೊಂದಿಗೆ ಅವರು ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಸೋಂಕು ಹೇಗೆ ತಗುಲಿತು‌ ಎನ್ನುವುದು ನಿಗೂಢವಾಗಿದೆ. ಈ ಕುರಿತ ತನಿಖೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು