ಶನಿವಾರ, ಮೇ 8, 2021
24 °C
ಸಿಂಗಟಾಲೂರು ನೀರಾವರಿ ಯೋಜನೆ ಭೂ ಪರಿಹಾರ ಬಾಕಿ

ಭೂಸ್ವಾಧೀನಾಧಿಕಾರಿ ಕಚೇರಿ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೂವಿನಹಡಗಲಿ: ರೈತರ ಜಮೀನುಗಳಿಗೆ ಭೂ ಪರಿಹಾರ ನೀಡಲು ವಿಳಂಬ ನೀತಿ ಅನುಸರಿಸಿದ ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿಭಾಗೀಯ ಕಚೇರಿ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯನ್ನು ನ್ಯಾಯಾಲಯ ಆದೇಶದ ಮೇರೆಗೆ ಸೋಮವಾರ ಜಪ್ತಿ ಮಾಡಲಾಯಿತು.

ಕೆ.ಅಯ್ಯನಹಳ್ಳಿ ಕಂದಾಯ ಗ್ರಾಮಕ್ಕೆ ಸೇರಿದ ಜಮೀನುಗಳನ್ನು ನೀರಾವರಿ ಉದ್ದೇಶಕ್ಕಾಗಿ ದಶಕದ ಹಿಂದೆ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು. ಆದರೆ ರೈತರಿಗೆ ಭೂ ಪರಿಹಾರ ನೀಡಿರಲಿಲ್ಲ. ಸರ್ಕಾರದ ವಿಳಂಬ ನೀತಿಯನ್ನು ಪ್ರಶ್ನಿಸಿ ರೈತರಾದ ಲಂಬಾಣಿ ವಾಲ್ಯಾನಾಯ್ಕ, ಅಂಗಡಿ ಅಮಿನಾಬೀ ಸೇರಿ 14 ಜನರು ನ್ಯಾಯಾಲಯ ಮೆಟ್ಟಿಲೇರಿ ಬಾಕಿ ಇರುವ ₹ 50 ಲಕ್ಷ
ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಪರಿಹಾರ ನೀಡುವುದಾಗಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಕೆಲ
ವರ್ಷಗಳಿಂದ ವಿಳಂಬ ಮಾಡುತ್ತಲೇ ಬಂದಿದ್ದರು.

ಇಲ್ಲಿನ ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಲಯವು ಭೂ ಪರಿಹಾರ ಬಾಕಿ ಉಳಿಸಿಕೊಂಡಿರುವ ಸಂಬಂಧಿತ ಕಚೇರಿಗಳ ಜಪ್ತಿಗೆ ವಾರಂಟ್ ಜಾರಿಗೊಳಿಸಿತ್ತು. ರೈತರ ಪರ ವಕೀಲರಾದ ರತ್ನಾಕರ, ಬಿ.ಶಿವಾನಂದ ಹಾಗೂ ನ್ಯಾಯಾಲಯದ ಸಿಬ್ಬಂದಿ ಕೆ.ವೀರೇಶ, ಗೂಳೆಪ್ಪ ಅವರು ಕಚೇರಿಗಳನ್ನು ಜಪ್ತಿ ಮಾಡಿದರು.

ಭೂ ಸ್ವಾಧೀನ ಕಚೇರಿಯಲ್ಲಿದ್ದ ಪೀಠೋಪಕರಣ, ಗಾಡ್ರೇಜ್ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆ ವಿಭಾಗೀಯ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಗಳನ್ನು ಜಪ್ತಿ ಮಾಡಿ, ನ್ಯಾಯಾಲಯ ವಶಕ್ಕೆ ಒಪ್ಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು