ಗುರುವಾರ , ಫೆಬ್ರವರಿ 25, 2021
20 °C

ಬಳ್ಳಾರಿ ಕೋವಿಡ್-19: ಒಬ್ಬಗುಣಮುಖ ಆಸ್ಪತ್ರೆಯಿಂದ ಬಿಡುಗಡೆ, 5 ಸೋಂಕಿತರು ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಕೊರೋನಾ ಸೋಂಕಿತ‌ ವ್ಯಕ್ತಿಯೊಬ್ಬ ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89, ಪಿ-91 ಮತ್ತು ಪಿ-141 ನಂತರ ಪಿ-90 & ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತಿಬ್ಬರು 21 ವರ್ಷ ವಯಸ್ಸಿನ ಪಿ-333 & 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಭಾನುವಾರ ಗುಣಮುಖರಾದ ಹೊಸಪೇಟೆಯ ಪಿ-336 ಅವರನ್ನು ಬಿಡುಗಡೆ ಮಾಡಲಾಯಿತು. ಇವರು ಸಹ ಹೊಸಪೇಟೆ ನಗರಕ್ಕೆ ಸೇರಿದವರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-336 ಅವರಿಗೆ ಹೂಗುಚ್ಛ ನೀಡಿ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿ, ಚಿಕಿತ್ಸೆ ನೀಡಿದೆವು, ಅವರು‌ ಇಂದು ಗುಣಮುಖರಾಗಿ ಹೊರಬಂದಿದ್ದಾರೆ ಎಂದರು.

ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮತ್ತು 14 ದಿನಗಳ ಕಾಲ ಸೆಲ್ಫ್ ರಿಪೋರ್ಟಿಂಗ್ ಮಾಡಲಾಗುವುದು ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಹಾಗೂ ನಮ್ಮ ರ್ಯಾಪಿಡ್ ರೆಸ್ಪಾನ್ಸ್ ತಂಡದಿಂದ 28 ದಿನಗಳ ಕಾಲ ನಿಗಾವಹಿಸಲಾಗುವುದು. ಈ ಆರ್‌‌ಆರ್‌ಟಿ ತಂಡಗಳು ಗುಣಮುಖರಾಗಿರುವ ಈ ಜನರ ಮನೆಗಳ ಸುತ್ತಮುತ್ತಲಿನ ಮನೆಯವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತವೆ ಎಂದರು.

ಗುಣಮುಖರಾಗಿ ಹೊರಬಂದ ಪಿ- 336 ನಂತರ ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ‌ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ನನಗೆ ಸಮರ್ಪಕ ಚಿಕಿತ್ಸೆ ಕೊಟ್ಟರು ಮತ್ತು ಸ್ಥೈರ್ಯ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿದರು, ಗುಣಮಟ್ಟದ ಆಹಾರ ಒದಗಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಋಣವನ್ನು‌ ನಾವೆಂದು ಮರೆಯುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನ, ಡಾ.ಅನಿಲ್, ಡಾ.ಲಿಂಗರಾಜು, ಡಾ.ವಿಜಯ ಶಂಕರ್, ಡಾ.ಸುನೀಲ್, ಡಾ.ವಿನಯ್, ಡಾ.ಸುಜಾತಾ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ್, ಡಾ.ಉಮಾ‌ಮಹೇಶ್ವರಿ‌‌ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು