ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್ಇ: ಮಂಗಳವಾರ 10ನೇ ತರಗತಿ ಫಲಿತಾಂಶ

Last Updated 28 ಮೇ 2018, 19:27 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಫಲಿತಾಂಶ ಮಂಗಳವಾರ (ಮೇ 29) ಸಂಜೆ 4 ಗಂಟೆಗೆ ಪ್ರಕಟವಾಗಲಿದೆ.

ಮಾರ್ಚ್ 5ರಿಂದ ಏಪ್ರಿಲ್ 4ರವರೆಗೆ ನಡೆದ ಪರೀಕ್ಷೆಗೆ ಒಟ್ಟು 16 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಸಿಬಿಎಸ್ಇ ಎಂಟು ವರ್ಷಗಳ ಬಳಿಕ ನಡೆಸಿದ ಕಡ್ಡಾಯ ಬೋರ್ಡ್ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳ ಮೊದಲ ತಂಡ ಇದಾಗಿದೆ.

‘2017–18ನೇ ಸಾಲಿನಲ್ಲಿ ನಡೆದ ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ಬಗ್ಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಅನಿಲ್ ಸ್ವರೂಪ್ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ದೆಹಲಿ, ಹರಿಯಾಣ ಹಾಗೂ ಜಾರ್ಖಂಡ್‌ನಲ್ಲಿ 10ನೇ ತರಗತಿಯ ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಈ ವರ್ಷದ ಪರೀಕ್ಷೆಗಳು ವಿವಾದಕ್ಕೆ ಕಾರಣವಾಗಿದ್ದವು. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು ಮರು ಪರೀಕ್ಷೆ ನಡೆಸದೆ ಇರಲು ತೀರ್ಮಾನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT