ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ವಿರೋಧ

Last Updated 3 ಸೆಪ್ಟೆಂಬರ್ 2021, 3:52 IST
ಅಕ್ಷರ ಗಾತ್ರ

ತೋರಣಗಲ್ಲು: ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯನ್ನು ವಿರೋಧಿಸಿ ನಾಡ ಕಾರ್ಯಾಲಯದ ಉಪ ತಹಶೀಲ್ದಾರ್ ಸುಬ್ಬರಾವ್ ದೇಸಾಯಿ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.

ಗ್ರಾಮ ಘಟಕದ ಸಿಪಿಎಂ ಕಾರ್ಯದರ್ಶಿ ಎ. ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಕನ್ನಡ ಭಾಷೆ ಹಾಗೂ ಕನ್ನಡಿಗರ ಅಭಿವೃದ್ಧಿಗೆ ಮಾರಾಕವಾಗಿದೆ. ಈ ನೀತಿಯ ಜಾರಿಯಿಂದ ದಲಿತ, ಹಿಂದೂಳಿದ ವರ್ಗದ ಬಡ ಜನರು ಮೂಲಶಿಕ್ಷಣ ದಿಂದ ವಂಚಿತರಾಗುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಥಿಕ ಲಾಭಕ್ಕಾಗಿ ಈ ನೀತಿ ಜಾರಿಗೆ ಬರುತ್ತಿರುವುದು ದುರಂತದ ವಿಚಾರ. ಶೀಘ್ರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಗ್ರಾಮದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ದಲಿತ, ಹಿಂದುಳಿದ ವರ್ಗದ ಬಡ ಜನರ ವಿರೋಧಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಅರ್ಜನ್, ಸೈಯದ್ ಶರೀಫ್, ಎಚ್. ಸ್ವಾಮಿ, ಎಸ್. ಕಾಲೂಬಾ, ಕೆ.ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT