ಸೋಮವಾರ, ಆಗಸ್ಟ್ 19, 2019
23 °C

370ನೇ ವಿಧಿ ರದ್ದು; ಸಿಪಿಎಂ ಪ್ರತಿಭಟನೆ

Published:
Updated:
Prajavani

ಹೊಸಪೇಟೆ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಕೈಗೊಂಡಿರುವ ತೀರ್ಮಾನವನ್ನು ವಿರೋಧಿಸಿ ಸಿಪಿಎಂ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರಮಿಕ ಭವನದ ಎದುರು ಸೇರಿದ ಕಾರ್ಯಕರ್ತರು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ಮಾತನಾಡಿದ ಪಕ್ಷದ ಮುಖಂಡ ಭಾಸ್ಕರ್‌ ರೆಡ್ಡಿ, ‘370ನೇ ವಿಧಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾದ ತೀರ್ಮಾನ ಕೈಗೊಂಡಿದೆ. ಇದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಷ್ಟು ಅಸ್ಥಿರತೆ ಉಂಟಾಗಲಿದೆ. ಕಾರ್ಪೊರೇಟ್‌, ಬಂಡವಾಳಶಾಹಿಗಳಿಗೆ ಅಲ್ಲಿ ಉದ್ಯಮ ನಡೆಸಲು ಅನುಕೂಲ ಮಾಡಿಕೊಟ್ಟಿದೆ. ಇದರಿಂದ ಸ್ಥಳೀಯರಿಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದರು.

‘ಯಾರ ಜತೆಗೂ ಚರ್ಚಿಸದೇ ಏಕಪಕ್ಷೀಯವಾಗಿ ಕೈಗೊಂಡಿರುವ ಈ ತೀರ್ಮಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಲ್ಲದು. ಇದು ಸರ್ವಾಧಿಕಾರ ಧೋರಣೆಯ ಪ್ರತೀಕ’ ಎಂದು ಖಂಡಿಸಿದರು.

ಮುಖಂಡರಾದ ಜಂಬಯ್ಯ ನಾಯಕ, ಎ. ಕರುಣಾನಿಧಿ, ಯಲ್ಲಾಲಿಂಗ, ನಾಗರತ್ನಮ್ಮ, ಗೋಪಾಲ ಇದ್ದರು.

 

Post Comments (+)