ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗರ ಮತ್ತು ಸಾಮಾನ್ಯ ರೋಗಿಗಳಿಗೆ ರೋಗಿಗಳಿಗೆ ಆಕ್ಸಿಜನ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಆಕ್ಸಿಜನ್ ಸಮರ್ಪಕ ಪೂರೈಕೆಗೆ ಸಂಬಂಧಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ರೀತಿಯ ತೊಂದರೆಯಿಲ್ಲದಂತೆ ಪ್ರತಿನಿತ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‍ಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 350 ಆಕ್ಸಿಜನ್ ಬೆಡ್‍ಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್ ಸೋಂಕಿತರು ಮತ್ತು ಸೋಂಕಿತರಲ್ಲದವರಿಗಾಗಿ 88 ವೆಂಟಿಲೇಟರ್ ಗಳು ಲಭ್ಯ ಇವೆ ಎಂದು ತಿಳಿಸಿದ್ದಾರೆ.

ಎಲ್ಲ ರೀತಿಯ ಸಲಕರಣೆಗಳಿಗೆ ಮತ್ತು ಬೆಡ್‍ಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ನಿರ್ವಹಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಜಂಬೋ ಸಿಲಿಂಡರ್ ಗಳ ಮೂಲಕ ಹಾಗೂ ಜಿಲ್ಲಾಸ್ಪತ್ರೆಯಲ್ಲಿ 6 ಕಿ ಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಕಂಟೈನರ್ ಮೂಲಕ ವಿತರಿಸಲಾಗುತ್ತಿದೆ.ಟ್ರಾಮಾ ಕೇರ್ ಸೆಂಟರ್ ನಲ್ಲಿ 13 ಕಿಲೋ ಲೀಟರ್ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ 19ಕಿಲೋ ಲೀಟರ್ ಟ್ಯಾಂಕ್‍ಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.