ಹೊಸಪೇಟೆ: ಬೈಸಿಕಲ್‌ ತುಳಿದ ಜಿಲ್ಲಾಧಿಕಾರಿ

ಮಂಗಳವಾರ, ಮಾರ್ಚ್ 26, 2019
33 °C

ಹೊಸಪೇಟೆ: ಬೈಸಿಕಲ್‌ ತುಳಿದ ಜಿಲ್ಲಾಧಿಕಾರಿ

Published:
Updated:
Prajavani

ಹೊಸಪೇಟೆ: ’ಹಂಪಿ ಉತ್ಸವ’ದ ಪ್ರಯುಕ್ತ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೈಸಿಕಲ್‌ ರ್‍ಯಾಲಿಯಲ್ಲಿ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌ ಸೈಕಲ್‌ ತುಳಿದರು.

ನಗರದ ಮುನ್ಸಿಪಲ್‌ ಮೈದಾನದಲ್ಲಿ ರ್‍ಯಾಲಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಬಳಿಕ ಯುವಕರು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಉತ್ಸಾಹದಿಂದ ಬೈಸಿಕಲ್‌ ಓಡಿಸಿದರು.

ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತ, ರೋಟರಿ ವೃತ್ತ, ಸೋಗಿ ಮಾರುಕಟ್ಟೆ, ರಾಮಾ ಟಾಕೀಸ್‌, ವಾಲ್ಮೀಕಿ ವೃತ್ತ, ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ಮೂಲಕ ಹಾದು ಪುನಃ ಮುನ್ಸಿಪಲ್‌ ಮೈದಾನದಲ್ಲಿ ರ್‍ಯಾಲಿ ಕೊನೆಗೊಂಡಿತು.

‘ಹಂಪಿ ಉತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದಕ್ಕಾಗಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ವಿ. ರಮೇಶ್‌, ತಾಲ್ಲೂಕು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಅಶ್ವಿನ್‌ ಕೋತಂಬ್ರಿ, ರೌಂಡ್‌ ಟೇಬಲ್‌ ಅಧ್ಯಕ್ಷ ರಾಜೇಶ್‌ ಕೋರಿಶೆಟ್ಟರ್‌ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !