ಬುಧವಾರ, ನವೆಂಬರ್ 25, 2020
19 °C

ಸಂಪುಟ ವಿಸ್ತರಣೆಗೆ ಯಾವುದೇ ಗೊಂದಲವಿಲ್ಲ: ಗೋವಿಂದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವಿಷಯದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಶುಕ್ರವಾರ ಇಲ್ಲಿ ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ನಾನು ಕೂಡ ನವದೆಹಲಿಗೆ ಹೋಗಿದ್ದೆ. ಇಬ್ಬರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಬಂದಿದ್ದೇವೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಚರ್ಚಿಸಿದ್ದೇವೆ. ಇತ್ತೀಚೆಗೆ ನಡೆದ ಉಪಚುನಾವಣೆ, ರಾಜ್ಯದ ಸ್ಥಿತಿಗತಿ, ಪಕ್ಷದ ಕುರಿತು ಚರ್ಚೆ ಮಾಡಿದ್ದೇವೆ. ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಅವರಿಗೆ ತಿಳಿಸಿದಾಗ, ‘ಇನ್ನೂ ಕೆಲವರ ಜತೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ’ ಎಂದು ಕಾರಜೋಳ ತಿಳಿಸಿದರು.

ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರ ಸತತ ಪ್ರಯತ್ನದಿಂದ ವಿಜಯನಗರ ಹೊಸ ಜಿಲ್ಲೆ ರಚನೆಗೆ ಒಪ್ಪಿಗೆ ಸಿಕ್ಕಿದೆ. ಹೊಸ ಜಿಲ್ಲೆಗೆ ಎಲ್ಲ ವ್ಯವಸ್ಥೆ ಮಾಡಬೇಕಾಗುತ್ತದೆ. ಸರ್ಕಾರಿ ಕಚೇರಿಗಳ ನಿರ್ಮಾಣ ಸೇರಿದಂತೆ ಹತ್ತು ಹಲವು ಕೆಲಸಗಳಾಗಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ, ತುಂಗಭದ್ರಾ ನದಿ ಸಮೀಪವಿರುವ ದೊಡ್ಡ ಊರು ಹೊಸಪೇಟೆ. ಐತಿಹಾಸಿಕವಾಗಿಯೂ ಪ್ರಾಮುಖ್ಯತೆ ಹೊಂದಿದೆ. ಜಿಲ್ಲೆ ಆಗುತ್ತಿರುವುದು ಒಳ್ಳೆಯ ಸಂಗತಿ. ಅದರ ಸಂಪೂರ್ಣ ಶ್ರೇಯ ಆನಂದ್‌ ಸಿಂಗ್‌ ಅವರಿಗೆ ಸಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು