ಪಿ.ಡಿ.ಐ.ಟಿ.ಯಲ್ಲಿ ಪದವಿ ದಿನ

ಗುರುವಾರ , ಜೂಲೈ 18, 2019
29 °C
350 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪಿ.ಡಿ.ಐ.ಟಿ.ಯಲ್ಲಿ ಪದವಿ ದಿನ

Published:
Updated:
Prajavani

ಹೊಸಪೇಟೆ: ಇಲ್ಲಿನ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನಲ್ಲಿ ಬುಧವಾರ ಸಂಜೆ ಪದವಿ ದಿನ ಆಚರಿಸಲಾಯಿತು.

ಬಿ.ಇ., ಎಂ.ಟೆಕ್., ಎಂ.ಬಿ.ಎ. ಮುಗಿಸಿರುವ 350 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಅದಕ್ಕೆ ವಿದ್ಯಾರ್ಥಿಗಳ ಪೋಷಕರು ಸಾಕ್ಷಿಯಾದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜ್, ’ಯುವಕರಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಂಡು ಮುಂದೆ ಬರಬೇಕು. ದೇಶದ ಪ್ರಗತಿಗೆ ಕೊಡುಗೆ ನೀಡಬೇಕು. ಸೃಜನಶೀಲರಾಗುವುದರ ಜತೆಗೆ ಉದ್ಯಮಶೀಲರಾಗಬೇಕು‘ ಎಂದು ಹೇಳಿದರು.

‘ಕಠಿಣ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು. ಅದು ಬಿಟ್ಟರೆ ಬೇರೆ ಮಾರ್ಗವಿಲ್ಲ. ಹೆಚ್ಚು ಕಷ್ಟಪಟ್ಟರೆ ಹೆಚ್ಚಿನ ಯಶಸ್ಸು ಸಿಗುತ್ತದೆ. ಈ ಸೂತ್ರದೊಂದಿಗೆ ಕೆಲಸ ಮಾಡಬೇಕು‘ ಎಂದರು.

ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಂ. ಮಹೇಶ್ವರ ಸ್ವಾಮಿ, ಪ್ರಾಚಾರ್ಯ ಎಸ್‌.ಎಂ. ಶಶಿಧರ್‌, ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್‌, ಸಂಘದ ಪದಾಧಿಕಾರಿಗಳಾದ ಎಚ್.ಎಂ. ವೀರಭದ್ರ ಶರ್ಮಾ, ಕೆ. ವೀರೇಶ್‍ಗೌಡ, ಏಕಾಮರೇಶ ತಾಂಡೂರ, ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ. ಮಾಲತೇಶ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !