ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದು ಬಿದ್ದ ಕೋಟೆ ಗೋಡೆಕ್ರಮಕ್ಕೆ ಸಂರಕ್ಷಣಾ ಸೇನೆ ಆಗ್ರಹ

Last Updated 16 ಮಾರ್ಚ್ 2021, 13:56 IST
ಅಕ್ಷರ ಗಾತ್ರ

ವಿಜಯನಗರ (ಹೊಸಪೇಟೆ): ತಾಲ್ಲೂಕಿನ ಹಂಪಿ ಕಮಲ ಮಹಲ್‌ ಬಳಿ ಇತ್ತೀಚೆಗೆ ಅಳಿಯ ರಾಮರಾಯನ ಅರಮನೆಯ ಕೋಟೆ ಗೋಡೆ ಕುಸಿದು ಬೀಳಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ಆಗ್ರಹಿಸಿದೆ.

ಈ ಸಂಬಂಧ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ಅವರಿಗೆ ಮಂಗಳವಾರ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

‘ಕೋಟೆ ಗೋಡೆಯಿಂದ ಸ್ವಲ್ಪವೇ ದೂರದಲ್ಲಿ ಕೊಳವೆಬಾವಿ ಕೊರೆಸಲಾಗಿದೆ. ಕಟ್ಟಡಗಳ ನಿರ್ಮಾಣಕ್ಕಾಗಿ ಭಾರಿ ವಾಹನಗಳಲ್ಲಿ ಸರಕು ತರಲಾಗಿದೆ. ಇದರ ಪರಿಣಾಮದಿಂದ ಕೋಟೆ ಗೋಡೆ ಕುಸಿದು ಬಿದ್ದಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಮುಖ್ಯ ಕಾರಣ. ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಕೋಟೆ ಗೋಡೆ ಪುನರ್‌ ನಿರ್ಮಿಸಬೇಕು’ ಎಂದು ಆಗ್ರಹಿಸಿದರು. ಸೇನೆಯ ಅಧ್ಯಕ್ಷ ವಿಶ್ವನಾಥ ಮಾಳಗಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT