ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹ

7

ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹ

Published:
Updated:
Deccan Herald

ಹೊಸಪೇಟೆ: ಸಮರ್ಪಕವಾಗಿ ಮಳೆಯಾಗದೆ ರೈತರು ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಸೇನೆಯ ಕಾರ್ಯಕರ್ತರು ಈ ಸಂಬಂಧ ಶುಕ್ರವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ತಾಲ್ಲೂಕಿನ 4,380 ಎಕರೆ ಪ್ರದೇಶದಲ್ಲಿ ಮಳೆ ಬಾರದೆ ಬೆಳೆ ಹಾನಿಯಾಗಿದೆ. ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿಯೂ ಇದೇ ಸ್ಥಿತಿ ಇದೆ. ಜಿಲ್ಲೆಯಲ್ಲಿ ಕಳಪೆ ರಸಗೊಬ್ಬರ, ಬೀಜ, ಕ್ರಿಮಿನಾಶಕ ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕಡಿವಾನ ಹಾಕಬೇಕು. ಕೃಷಿ ಸಲಕರಣೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

‘ಭತ್ತ ಬೆಳೆಯುವ ಸಣ್ಣ, ಅತಿ ಸಣ್ಣ ರೈತರು ದುಬಾರಿ ಬೆಲೆ ಕೊಟ್ಟು ಭತ್ತ ಕಟಾವು ಮಾಡಿಸಬೇಕು. ಅದು ಅವರಿಗೆ ಹೊರೆಯಾಗುತ್ತಿದೆ. ಕೃಷಿ ಇಲಾಖೆಯು ಸಬ್ಸಿಡಿ ದರದಲ್ಲಿ ಯಂತ್ರಗಳಿಗೆ ವ್ಯವಸ್ಥೆ ಮಾಡಬೇಕು. ಭೂ ಸುಧಾರಣೆ ತಿದ್ದುಪಡಿ ಮಸೂದೆ ಮಂಡಿಸಬಾರದು. ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಸಂಘದ ಜಿಲ್ಲಾ ಅಧ್ಯಕ್ಷ ಜೆ. ಕಾರ್ತಿಕ್‌, ಉಪಾಧ್ಯಕ್ಷ ವಿ.ಟಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ನಗರ ಘಟಕದ ಅಧ್ಯಕ್ಷ ಚಿನ್ನದೊರೆ, ಮುಖಂಡ ರಂಗಪ್ಪ ಅವರು ಮನವಿ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !