ಅತ್ಯಾಚಾರದ ಆರೋಪಿ ಬಂಧನಕ್ಕೆ ಆಗ್ರಹ; ಸಂಘ ಸಂಸ್ಥೆಗಳಿಂದ ಠಾಣೆ ಎದುರು ಪ್ರತಿಭಟನೆ

ಶುಕ್ರವಾರ, ಏಪ್ರಿಲ್ 26, 2019
33 °C

ಅತ್ಯಾಚಾರದ ಆರೋಪಿ ಬಂಧನಕ್ಕೆ ಆಗ್ರಹ; ಸಂಘ ಸಂಸ್ಥೆಗಳಿಂದ ಠಾಣೆ ಎದುರು ಪ್ರತಿಭಟನೆ

Published:
Updated:
Prajavani

ಹೊಸಪೇಟೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿರುವ ದೇವರಗುಡಿ ಚಂದ್ರಶೇಖರ್‌ನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಶುಕ್ರವಾರ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

‘14 ವರ್ಷದ ಬಾಲಕಿ ಮೇಲೆ ನಿರಂತರ ಮೂರು ತಿಂಗಳು ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭವತಿಯಾಗಿದ್ದಾಳೆ. ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದು. ಚಂದ್ರಶೇಖರ್‌ನನ್ನು ಕೂಡಲೇ ಬಂಧಿಸದಿದ್ದಲ್ಲಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ’ ಎಂದು ಡಿ.ವೈ.ಎಸ್‌.ಪಿ.ಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

‘‍ಪೊಲೀಸ್‌ ಇಲಾಖೆಯು ಬಾಲಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ರಕ್ಷಣೆ ಕೊಡಬೇಕು. ಎಫ್‌.ಐ.ಆರ್‌. ದಾಖಲಿಸಿಕೊಂಡು ಹಲವು ದಿನಗಳು ಕಳೆದಿವೆ. ಹಾಗಾಗಿ ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ, ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಮಾಳಮ್ಮ, ಸಿಪಿಎಂ ಕಾರ್ಯದರ್ಶಿ ಆರ್‌. ಭಾಸ್ಕರ್‌ ರೆಡ್ಡಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಕೆ. ನಾಗರತ್ನಮ್ಮ, ಮುಖಂಡರಾದ ಎಂ. ಗೋಪಾಲ, ಕೆ. ಯಲ್ಲಾಲಿಂಗ, ಕೆ.ಎಂ. ಸಂತೋಷ್‌ ಕುಮಾರ್‌, ಕಲ್ಯಾಣಯ್ಯ, ವಿ. ಸ್ವಾಮಿ, ಜೆ. ಶಿವಕುಮಾರ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !