ಬುಧವಾರ, ಸೆಪ್ಟೆಂಬರ್ 18, 2019
26 °C

ಬಾಲಕಿ ಕೊಲೆಗಡುಕರ ಬಂಧನಕ್ಕೆ ಆಗ್ರಹ

Published:
Updated:
Prajavani

ಹೊಸಪೇಟೆ: ಸಂಡೂರು ತಾಲ್ಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿಯನ್ನು ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕೆಂದು ಸಿಪಿಎಂ ತಾಲ್ಲೂಕು ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಸಮಿತಿಯ ಕಾರ್ಯಕರ್ತರು ಬುಧವಾರ ಡಿ.ವೈ.ಎಸ್ಪಿ. ವಿ. ರಘುಕುಮಾರ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

‘ಆರು ವರ್ಷದ ಬಾಲಕಿಯನ್ನು ಅಪಹರಿಸಿ, ನಂತರ ಅಮಾನುಷವಾಗಿ ಕೊಲೆ ಎಸಗಿರುವ ಕೃತ್ಯವನ್ನು ಪಕ್ಷ ಕಟುವಾಗಿ ಖಂಡಿಸುತ್ತದೆ. ಬಾಲಕಿಯ ಪೋಷಕರು ದಿನಗೂಲಿ ನೌಕರರಾಗಿದ್ದಾರೆ. ಮಗಳ ಸಾವು ಅವರಿಗೆ ಆಘಾತ ಉಂಟು ಮಾಡಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಕೊಲೆ ಮಾಡಿರುವವರನ್ನು ಬಂಧಿಸಬೇಕು. ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು’ ಎಂದು ಆಗ್ರಹಿಸಿದರು.

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಆರ್‌. ಭಾಸ್ಕರ್‌ ರೆಡ್ಡಿ, ಮುಖಂಡರಾದ ಎಂ. ಜಂಬಯ್ಯ ನಾಯಕ, ಎ ಕರುಣಾನಿಧಿ, ಎಂ. ಯಲ್ಲಾಲಿಂಗ, ಜೆ. ಶಿವಕುಮಾರ, ಎಂ. ಗೋಪಾಲ, ಕೆ. ರಾಮಾಂಜಿನಿ ಇದ್ದರು.

Post Comments (+)