ಬುಧವಾರ, ಫೆಬ್ರವರಿ 19, 2020
17 °C

ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ‘ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಬೇಕು’ ಎಂದು ಮದ್ಯ ನಿಷೇಧ ಆಂದೋಲನ ಸಂಘಟನೆ ಆಗ್ರಹಿಸಿದೆ.

ಸಂಘಟನೆಯ ಸದಸ್ಯರು ಮಂಗಳವಾರ ಈ ಕುರಿತು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಸಂಘಟನೆಯ ಸದಸ್ಯರು ಮದ್ಯ ನಿಷೇಧಕ್ಕಾಗಿ ಚಿತ್ರದುರ್ಗದಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರಿಗೆ ತಲುಪಿದ್ದು, ಅಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ಎಲ್ಲ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲೂ ಮನವಿ ಕೊಡಲಾಗಿದೆ. ಮದ್ಯ ಸೇವನೆಯಿಂದ ಅನೇಕ ಕುಟುಂಬಗಳು ಹಾಳಾಗುತ್ತಿವೆ. ಅದನ್ನು ತಡೆಯಬೇಕಾದರೆ ಸರ್ಕಾರ ಮದ್ಯದ ಮೇಲೆ ನಿಷೇಧ ಹೇರಬೇಕು’ ಎಂದು ಆಗ್ರಹಿಸಿದ್ದಾರೆ. 

ಸಂಘಟನೆಯ ಸದಸ್ಯರಾದ ಎಚ್‌. ಲಕ್ಷ್ಮಿದೇವಿ, ವಿಜಯಲಕ್ಷ್ಮಿ, ಹುಲಿಗೆಮ್ಮ, ಸರಸ್ವತಿ, ಮಲ್ಲಿಕಾರ್ಜನ, ಸುನಿತಾ, ಚಾಂದಿನಿ, ಪ್ರತಾಪ್, ರವಿಕಿರಣ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು