ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಮ್ಮೆ ‘ನೀಟ್‌’ ಪರೀಕ್ಷೆಗೆ ಆಗ್ರಹ

Last Updated 6 ಮೇ 2019, 13:17 IST
ಅಕ್ಷರ ಗಾತ್ರ

ಹೊಸಪೇಟೆ: ‘ಹಂಪಿ ಎಕ್ಸಪ್ರೆಸ್‌ ರೈಲು ತಡವಾಗಿ ಬೆಂಗಳೂರು ತಲುಪಿದ್ದರಿಂದ ‘ನೀಟ್‌’ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ‘ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಸೋಮವಾರ ಸಂಜೆ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ‘ರೈಲ್ವೆ ಇಲಾಖೆಯ ತಪ್ಪಿನಿಂದ ವಿದ್ಯಾರ್ಥಿಗಳು ಸಕಾಲಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ವರ್ಷವಿಡೀ ಕಷ್ಟಪಟ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಅವರ ಭವಿಷ್ಯ ಹಾಳಾಗಬಾರದು. ಯಾರಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲವೋ ಅಂತಹವರಿಗೆ ಪುನಃ ಪರೀಕ್ಷೆ ನಡೆಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯರಾಜ್ಯ ಸಮಿತಿ ಸದಸ್ಯರಾದ ಅಲ್ತಾಫ್, ಜಿಲ್ಲಾ ಅಧ್ಯಕ್ಷಮೊಹಮ್ಮದ್ ಗೌಸ್,ಕಾರ್ಯದರ್ಶಿ ಸಲೀಂ ಮಲಿಕ್,ಸಮಿತಿ ಸದಸ್ಯರಾದ ಫೈಜ್, ವಾಜಿದ್,ಶಾಹಿದ್ ಸೇರಿದಂತೆ ವಿದ್ಯಾರ್ಥಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT