ಹೊಸ ಸಾರಿಗೆ ನೀತಿ ಕೈಬಿಡಲು ಆಗ್ರಹ

7

ಹೊಸ ಸಾರಿಗೆ ನೀತಿ ಕೈಬಿಡಲು ಆಗ್ರಹ

Published:
Updated:

ಹುಬ್ಬಳ್ಳಿ: ಹೊಸ ಸಾರಿಗೆ ನೀತಿ ಕೈಬಿಡಬೇಕು, ಇಂಧನ ಬೆಲೆ ಕಡಿಮೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದರು.

ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಸೋಮವಾರ ಹುಬ್ಬಳ್ಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ‘ಸಾರಿಗೆ ಸಂಸ್ಥೆಯ ವಾಹನಗಳಿಗೆ ಉಚಿತವಾಗಿ ಟೋಲ್‌ ಪ್ರವೇಶಕ್ಕೆ ಅವಕಾಶ ನೀಡಬೇಕು. ರಾಜ್ಯ ಸಾರಿಗೆ ನಿಗಮಗಳಿಗೆ ಒದಗಿಸುವ ಇಂಧನ ಮೇಲಿನ ಸುಂಕ ಕಡಿಮೆ ಮಾಡಬೇಕು. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡಬೇಕು. ಅಂಗನವಾಡಿ ನೌಕರರನ್ನು ಕಾಯಂ ಎಂದು ಪರಿಗಣಿಸಬೇಕು. ಬಿಆರ್‌ಟಿಎಸ್‌ ಅನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸುಪರ್ದಿಗೆ ನೀಡಬೇಕು’ ಎಂದು ಮನವಿ ಮಾಡಿದರು.

ಒಕ್ಕೂಟದ ಹುಬ್ಬಳ್ಳಿ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್‌.ಎಫ್‌. ಕವಳಿಕಾಯಿ, ಕಾರ್ಯಾಧ್ಯಕ್ಷ ಎಂ.ವಿ. ಭಗವತಿ, ಅಧ್ಯಕ್ಷ ರಮೇಶ ಪಢತರೆ, ಎನ್‌.ಎ. ಖಾಜಿ ಇದ್ದರು.

 

 

 

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !