ಬರ ಸಮೀಕ್ಷೆ ನಡೆಸಿ, ಪರಿಹಾರ ಕೊಡಿ

7
ಉತ್ತರ ಹಾಗೂ ಮಧ್ಯ ಕರ್ನಾಟಕದಲ್ಲಿ ಬರ; ರೈತ ಸಂಘದ ಕಾರ್ಯಾಧ್ಯಕ್ಷ ವೀರಸಂಗಯ್ಯ ಆಗ್ರಹ

ಬರ ಸಮೀಕ್ಷೆ ನಡೆಸಿ, ಪರಿಹಾರ ಕೊಡಿ

Published:
Updated:
Deccan Herald

ಹೊಸಪೇಟೆ: ‘ರಾಜ್ಯದಲ್ಲಿ ಕೆಲವೆಡೆ ಮಳೆಯಾಗಿ ಸಮೃದ್ಧವಾಗಿದೆ. ಆದರೆ, ಉತ್ತರ ಮತ್ತು ಮಧ್ಯ ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದೆ ಬರದ ವಾತಾವರಣ ಆವರಿಸಿಕೊಂಡಿದೆ. ಕೂಡಲೇ ಬೆಳೆಹಾನಿ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ಕೊಡಲು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬರದಿಂದಾಗಿ ಒಣಗಿ ಹೋಗುತ್ತಿರುವ ಬೆಳೆಗಳನ್ನು ರೈತರು ಕಿತ್ತು ಹಾಕುತ್ತಿದ್ದಾರೆ. ಹೀಗಿದ್ದರೂ ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳು ಇನ್ನೂ ನಿದ್ರಾವಸ್ಥೆಯಲ್ಲೇ ಇದ್ದಾರೆ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಹಳ್ಳಿಗಳ ವಾಸ್ತವ ಚಿತ್ರಣದ ಮಾಹಿತಿ ಕಲೆ ಹಾಕಿ ವಿವರ ಸಂಗ್ರಹಿಸಬೇಕು. ಸರ್ಕಾರದಿಂದ ಆದಷ್ಟು ಶೀಘ್ರ ರೈತರಿಗೆ ಪರಿಹಾರ ಕೊಡಿಸಲು ಶ್ರಮಿಸಬೇಕು’ ಎಂದು ತಾಕೀತು ಮಾಡಿದರು.

‘ಬಳ್ಳಾರಿ ಜಿಲ್ಲೆಯ ಕೊಟ್ಟೂರು, ಹೂವಿನಹಡಗಲಿ, ಸಂಡೂರು, ಹೊಸಪೇಟೆ, ಕೂಡ್ಲಿಗಿಯಲ್ಲಿ ಸಂಪೂರ್ಣ ಬರದ ಛಾಯೆ ಆವರಿಸಿಕೊಂಡಿದೆ. ನೆರೆಯ ದಾವಣಗೆರೆ, ಕೊಪ್ಪಳ ಸೇರಿದಂತೆ ಇತರೆ ಕಡೆಗಳಲ್ಲೂ ಇದೇ ಸ್ಥಿತಿ ಇದೆ. ಎಲ್ಲಿಯೂ ಬರ ಇಲ್ಲ ಎಂದು ಹೇಳಿ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಬಾರದು’ ಎಂದು ಆಗ್ರಹಿಸಿದರು.

ತಾಲ್ಲೂಕು ಸಮಿತಿ ವಿಸರ್ಜನೆ: ‘ರೈತ ಸಂಘದ ಹೊಸಪೇಟೆ ತಾಲ್ಲೂಕು ಘಟಕವನ್ನು ವಿಸರ್ಜಿಸಲಾಗಿದ್ದು, ಘಂಟಿ ಸೋಮಶೇಖರ್‌ ಅವರನ್ನು ಪ್ರಧಾನ ಸಂಚಾಲಕ, ಕುಮಾರಸ್ವಾಮಿ ಅವರನ್ನು ಜಿಲ್ಲಾ ಉಪಾಧ್ಯಕ್ಷ ಹಾಗೂ ಎಸ್‌.ಎಂ. ನಾಗರತ್ನ ಅವರನ್ನು ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ತಾಲ್ಲೂಕಿನ 52 ಹಳ್ಳಿಗಳಲ್ಲಿ ಸಂಘವನ್ನು ಸಂಘಟಿಸುವ ಕೆಲಸ ಮಾಡುವರು. ಬರದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಪರಿಹಾರ ಕೊಡಿಸಲು ಶ್ರಮಿಸುವರು’ ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ಬಿ. ಗೋಣಿಬಸಪ್ಪ, ಮುಖಂಡ ಗೋಪಿನಾಥ ಇದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !