ಮಂಗಳವಾರ, ಜೂನ್ 22, 2021
24 °C

ಹೊಸಪೇಟೆ: ಉಚಿತ ಕೋವಿಡ್‌ ಲಸಿಕೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಸರ್ವರಿಗೂ ಉಚಿತ ಲಸಿಕೆ ನೀಡಬೇಕೆಂದು ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ಗುರುವಾರ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಇಂತಹ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚು ಕಾಲಹರಣ ಮಾಡಬಾರದು. ಎಲ್ಲ ರಾಜ್ಯಗಳಿಗೂ ಕೇಂದ್ರವೇ ಉಚಿತವಾಗಿ ಲಸಿಕೆ ಪೂರೈಸಿ, ಎಲ್ಲರಿಗೂ ತ್ವರಿತ ಗತಿಯಲ್ಲಿ ಕೊಡಿಸಲು ವ್ಯವಸ್ಥೆ ಮಾಡಬೇಕು. ಪಿ.ಎಂ. ಕೇರ್ಸ್‌ ನಿಧಿಯಲ್ಲಿ ಎಷ್ಟು ಹಣ ಸಂಗ್ರಹವಾಗಿದೆ ಎನ್ನುವುದರ ಬಗ್ಗೆ ಕೇಂದ್ರ ಸರ್ಕಾರ ಲೆಕ್ಕ ಕೊಟ್ಟು, ಕೋವಿಡ್‌ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಎಲ್ಲ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಔಷಧ ವ್ಯವಸ್ಥೆಯ ಲಭ್ಯತೆ ಖಾತ್ರಿ ಪಡಿಸಬೇಕು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ಮಾಸಿಕ ₹10,000 ಪರಿಹಾರ ಕೊಡಬೇಕು. ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ 10 ಕೆ.ಜಿ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನ ಕೆಲಸ ಕೊಟ್ಟು, ದಿನಕ್ಕೆ ₹600 ಕೂಲಿ ನಿಗದಿಪಡಿಸಬೇಕು.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ದುಡಿಯುವ ವರ್ಗದ ಜನರಿಗೆ ನೆರವು ನೀಡಬೇಕು. ಕೋವಿಡ್‌ ಮುಂಚೂಣಿ ಕಾರ್ಯದಲ್ಲಿ ತೊಡಗಿರುವವರಿಗೆ ಅಗತ್ಯ ಕಿಟ್‌ ನೀಡಬೇಕು ಎಂದು ಒತ್ತಾಯಿಸಿದರು. ಸಿಪಿಐಎಂನ ಜೆ. ಶಿವುಕುಮಾರ, ಎನ್‌. ಮಾಲತೇಶ್‌, ಸಿದ್ದಪ್ಪ ಇತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು