ಬುಧವಾರ, ಮಾರ್ಚ್ 29, 2023
30 °C

ಮಾದಕ ವಸ್ತು ಜಾಲ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಅಕ್ರಮ ಮಾದಕ ವಸ್ತು ಜಾಲದಲ್ಲಿ ನಗರದ ಶ್ರೀಮಂತರ ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ ಕೆಲ ಪೊಲೀಸರು ಶಾಮಿಲಾಗಿರುವ ಸಾಧ್ಯತೆ ಇರುವುದರಿಂದ ಅದರ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ ಜಾಲದಲ್ಲಿ ಸಕ್ರಿಯರಾಗಿದ್ದಾರೆ ಎನ್ನಲಾದ ನಗರದ ಶ್ರೀಮಂತರ ಮಕ್ಕಳಿಂದ ಪೊಲೀಸರು ಲಂಚ ಪಡೆದಿರುವ ಶಂಕೆಯಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಉನ್ನತಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಆರ್‌. ಭಾಸ್ಕರ್‌ ರೆಡ್ಡಿ, ಮರಡಿ ಜಂಬಯ್ಯ ನಾಯಕ, ಎ. ಕರುಣಾನಿಧಿ, ವಿ. ಸ್ವಾಮಿ, ರಮೇಶಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.