ಮಂಗಳವಾರ, ಮೇ 24, 2022
23 °C

ಐಟಿಐ ಪರೀಕ್ಷೆ ರದ್ದುಪಡಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ತರಬೇತಿ ಪಡೆಯದ ವಿದ್ಯಾರ್ಥಿಗಳಿಗೆ ಐಟಿಐ ಪರೀಕ್ಷೆ ನಿಗದಿಪಡಿಸಿರುವುದು ಸರಿಯಲ್ಲ. ಕೂಡಲೇ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಮೂಲಕ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ಐಟಿಐ ವಿದ್ಯಾರ್ಥಿಗಳಿಗೆ ಹತ್ತು ತಿಂಗಳಿಂದ ತರಬೇತಿ ಆಗಿಲ್ಲ. ಮೊದಲ ವರ್ಷದ ಪರೀಕ್ಷೆಯಿಂದ ವಿನಾಯಿತಿ ನೀಡಿ ನವದೆಹಲಿಯ ಡಿಜಿಟಿ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶವೂ ನೀಡಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಪರೀಕ್ಷೆ ರದ್ದುಪಡಿಸಿ, ಗೊಂದಲ ದೂರ ಮಾಡಬೇಕು ಎಂದು ಒತ್ತಾಯಿಸಿದರು.

ಎಐಡಿವೈಒ ಜಿಲ್ಲಾ ಉಪಾಧ್ಯಕ್ಷ ಎಚ್‌. ಎರ್ರಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಎನ್.ಎಲ್.ಪಂಪಾಪತಿ, ತಾಲ್ಲೂಕು ಸಂಚಾಲಕ ಕೆ.ಹುಲುಗಪ್ಪ, ಎಐಡಿವೈಒ ಸದಸ್ಯರಾದ ಹುಸೇನ್ ಬಾಷಾ, ಕೆ.ವೆಂಕಟೇಶ್, ಹನುಮಂತ, ಆನಂದ್, ಅರುಣ್, ಬಾಬು ಅಂಕ್ಲೇಶ್‌, ನೂರ್ ಬಾಷಾ, ಅಬ್ದುಲ್, ಐಟಿಐ ವಿದ್ಯಾರ್ಥಿಗಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು