ಭಾನುವಾರ, ಏಪ್ರಿಲ್ 11, 2021
32 °C

ಹೊಸಪೇಟೆ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದವರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್‌–2 ತಹಶೀಲ್ದಾರ್‌ ಮೇಘನಾ ಅವರಿಗೆ ಸಲ್ಲಿಸಿದರು.

‘ನ್ಯಾಯಾಲಯದ ಆವರಣದಲ್ಲಿ ವಕೀಲ ತಾರಿಹಳ್ಳಿ ವೆಂಕಟೇಶ್‌ ಅವರ ಹತ್ಯೆ ನಡೆದಿರುವುದು ಖಂಡನೀಯ. ತೆಲಂಗಾಣದಲ್ಲಿ ಇತ್ತೀಚೆಗೆ ವಕೀಲ ದಂಪತಿಯ ಕೊಲೆ ನಡೆದಿದೆ. ಅಲ್ಲಲ್ಲಿ ಹಲ್ಲೆ ಸೇರಿದಂತೆ ಇತರೆ ಘಟನೆಗಳು ವರದಿಯಾಗಿವೆ. ಹೀಗಿದ್ದರೂ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರದಿರುವುದು ದುರದೃಷ್ಟಕರ’ ಎಂದು ಹಿರಿಯ ವಕೀಲ ಪ್ರಭಾಕರ ರಾವ್‌ ಹೇಳಿದರು.

‘ಕೊಲೆಗೆ ಕಾರಣ ಏನೇ ಇದ್ದರೂ ಕಾನೂನಿನ ಅಡಿಯಲ್ಲಿ ರಕ್ಷಣೆ ಸಿಗಬೇಕು. ಎಲ್ಲ ವೃತ್ತಿನಿರತರಿಗೆ ರಕ್ಷಣೆ ಇದೆ. ಆದರೆ, ವಕೀಲರಿಗೆ ರಕ್ಷಣೆ ಇಲ್ಲ. ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಭರದಲ್ಲಿ ವಕೀಲರು ಅವರ ರಕ್ಷಣೆ ಮರೆತು ಹೋಗುತ್ತಿದ್ದಾರೆ. ಸರ್ಕಾರ ಗಮನ ಹರಿಸಿ ಆದಷ್ಟು ಶೀಘ್ರ ಕಾನೂನು ಜಾರಿಗೆ ತರಬೇಕು’ ಎಂದು ಸಂಘದ ತಾಲ್ಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಒತ್ತಾಯಿಸಿದರು.

‘ಸರ್ಕಾರದಿಂದ ವಕೀಲರಿಗೆ ರಕ್ಷಣೆ ಕೊಡಲು ಸಾಧ್ಯವಾಗುತ್ತಿಲ್ಲ. ವಕೀಲರ ಸಂರಕ್ಷಣಾ ಕಾಯ್ದೆ ಸದನದಲ್ಲಿ ಮಂಡಿಸಿ ಜಾರಿಗೆ ತರಬೇಕು’ ಎಂದು ವಕೀಲ ಪ್ರಹ್ಲಾದ್‌ ಆಗ್ರಹಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು