ಸೋಮವಾರ, ಅಕ್ಟೋಬರ್ 18, 2021
27 °C

ಹೊಸ ಅಧಿಸೂಚನೆ ಹೊರಡಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯವು ಬೋಧಕ ಹುದ್ದೆಗಳ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ಮೀಸಲಾತಿಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ಹಿಂಪಡೆದು ಹೊಸ ಅಧಿಸೂಚನೆ ಹೊರಡಿಸಬೇಕೆಂದು ಕರ್ನಾಟಕ ಮಹಿಳಾ ಅಧ್ಯಯನ ವಿದ್ಯಾರ್ಥಿ ಅಸೋಸಿಯೇಷನ್‌ ಆಗ್ರಹಿಸಿದೆ.

ಅಧಿಸೂಚನೆಯಲ್ಲಿ ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಬೇರ್ಪಡಿಸಿ ಮಹಿಳಾ ಅಧ್ಯಯನ ವಿಭಾಗಕ್ಕೆ ಪ್ರತ್ಯೇಕವಾಗಿ ತೋರಿಸಿ, ಸರ್ಕಾರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳಾ ಮೀಸಲು ಅನ್ವಯ ಮರು ಅಧಿಸೂಚನೆ ಹೊರಡಿಸಬೇಕೆಂದು ಸೋಮವಾರ ಪ್ರಕಟಣೆಯಲ್ಲಿ ಒತ್ತಾಯಿಸಿದೆ.

2018ರ ಯುಜಿಸಿ ನಿಯಮದ ಪ್ರಕಾರ, ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ಮೆರಿಟ್‌ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು ಎಂದೂ ಆಗ್ರಹಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.