ಸೋಮವಾರ, ಜೂನ್ 27, 2022
28 °C

ಪರಿಹಾರ ಘೋಷಣೆಗೆ ಅಲೆಮಾರಿ ಸಂಘಟನೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ಲಾಕ್‌ಡೌನ್ನಲ್ಲಿ ಸಂಕಷ್ಟದಲ್ಲಿರುವ ಅಲೆಮಾರಿ ಬುಡ್ಗ ಜಂಗಮ ಸಮುದಾಯಕ್ಕೆ ಪರಿಹಾರ ಘೋಷಿಸುವಂತೆ ಆಗ್ರಹಿಸಿ ಅಲೆಮಾರಿ ಬುಡ್ಗ ಜಂಗಮ ಸಂಘಟನೆಯ ಕಾರ್ಯಕರ್ತರು ಸೋಮವಾರ ನಗರದ ತಾಲ್ಲೂಕು ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ನಂತರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ‘ಬುಡ್ಗ ಜಂಗಮ ಸಮುದಾಯದವರು ಪಡಿತರ ಚೀಟಿ ಇಲ್ಲದೆ, ವಾಸಿಸಲು ಯೋಗ್ಯ ಮನೆ ಇಲ್ಲದೆ ಗುಡಿಸಲು ಕಟ್ಟಿಕೊಂಡು ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅಲೆಮಾರಿ ಸಮುದಾಯದ ಕುಟುಂಬಕ್ಕೆ ₹10 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು.

‘ಈ ಹಿಂದೆ ನಡೆದ ಅಲೆಮಾರಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೀಡಿದ ಭರವಸೆಯಂತೆ ಆಯೋಗ ರಚನೆ ಹಾಗೂ ಅಭಿವೃದ್ಧಿ ನಿಗಮ ಸ್ಥಾಪನೆ ಕಾರ್ಯರೂಪಕ್ಕೆ ತರಬೇಕು’ ಎಂದು ಆಗ್ರಹಿಸಿದರು.

ಬುಡ್ಗ ಜಂಗಮ ಜಾಗೃತ ಸೇವಾ ಸಂಘದ ಅಧ್ಯಕ್ಷ ಸಣ್ಣ ಮಾರೆಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ್ ರುದ್ರಾಕ್ಷಿ ಹಾಗೂ ಸಮುದಾಯದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು