ಶುಕ್ರವಾರ, ಆಗಸ್ಟ್ 6, 2021
21 °C
ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ

ಸುರೇಶ ಅಂಗಡಿ ಖಾತೆ ರಾಜ್ಯಕ್ಕೆ ಸಿಗಲಿ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರದ ಸಂಪುಟ ಪುನರ್ ರಚನೆಯಲ್ಲಿ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸ್ಥಾನವನ್ನು ರಾಜ್ಯದವರಿಗೆ ನೀಡಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.

ಕೋವಿಡ್‌ನಿಂದ ಅಂಗಡಿ ಅವರು ಅಕಾಲಿಕ ನಿಧನ ಹೊಂದಿದ ನಂತರ ಆ ಖಾತೆಯನ್ನು ಹೊಸಬರಿಗೆ ಕೊಟ್ಟಿಲ್ಲ. ಆ ಖಾತೆ ರಾಜ್ಯದವರಿಗೆ ಕೊಟ್ಟರೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇಡೀ ದೇಶದಲ್ಲಿಯೇ ಕರ್ನಾಟಕ ಮಾತ್ರ ರೈಲ್ವೆ ಯೋಜನೆಗಳಿಗೆ ಮೊದಲಿನಿಂದಲೂ ಸ್ಪಂದಿಸುತ್ತ ಬಂದಿದೆ. ಶೇ 50ರಷ್ಟು ಅನುದಾನದೊಂದಿಗೆ ಎಲ್ಲ ಕಾಮಗಾರಿಗಳನ್ನು ನಿರ್ವಹಿಸುತ್ತಿದೆ. ರೈಲ್ವೆಗೆ ಅಗತ್ಯ ಭೂಮಿ ನೀಡುತ್ತಿದೆ. ಆದರೆ, ಉಳಿದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.

ಆಂಧ್ರ ಪ್ರದೇಶ, ತೆಲಂಗಾಣ, ಕೇರಳದಲ್ಲಿ ಶೇ 80ರಷ್ಟು ರೈಲು ಮಾರ್ಗ ವಿದ್ಯುದ್ದೀಕರಣಗೊಂಡಿದೆ. ಆದರೆ, ರಾಜ್ಯದಲ್ಲಿ ಶೇ 37ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಬಿಜೆಪಿಯ 26 ಸಂಸದರು ಆಯ್ಕೆಗೊಂಡಿದ್ದು, ಈ ಪೈಕಿ ಒಬ್ಬರಿಗೆ ಅಂಗಡಿ ಅವರಿಂದ ತೆರವಾಗಿರುವ ಖಾತೆ ಕೊಟ್ಟರೆ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಸಮಿತಿಯ ಅಧ್ಯಕ್ಷ ವೈ. ಯಮುನೇಶ, ವಿಶ್ವನಾಥ, ಸಣ್ಣ ಮಾರೆಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು