ಸೋಮವಾರ, ಜನವರಿ 24, 2022
29 °C

ಪಾದಚಾರಿ ಮೇಲ್ಸೇತುವೆ, ಅಂಡರ್‌ಪಾಸ್‌ಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದ ಒಂದು ಮತ್ತು 12ನೇ ವಾರ್ಡಿನಿಂದ ಹಾದು ಹೋಗಿರುವ ರೈಲು ಮಾರ್ಗದ ಮೇಲೆ ಪಾದಚಾರಿ ಮೇಲ್ಸೇತುವೆ ಹಾಗೂ ಅಂಡರ್‌ಪಾಸ್‌ ನಿರ್ಮಿಸಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ, ಕಲ್ಯಾಣ ನಗರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

ಈ ಸಂಬಂಧ ಸಂಘದ ಮುಖಂಡರು ಮಂಗಳವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಕಲ್ಯಾಣ ನಗರ ಸಂಘದ ಅಧ್ಯಕ್ಷ ಬಿ.ಎಂ.ಗುರುಮೂರ್ತಿ ಮಾತನಾಡಿ, ’ನಗರದ 1 ಮತ್ತು 12ನೇ ವಾರ್ಡಿನ ಕಲ್ಯಾಣ ನಗರ, ಸಾಯಿರಾಮ್ ಬಡಾವಣೆ, ಕಾಜಾ ನಗರ ಹಾಗೂ ಹಳೆ ಚಿತ್ತವಾಡ್ಗಿ ವ್ಯಾಪ್ತಿಯಲ್ಲಿ ಅಂದಾಜು 15000 ಜನಸಂಖ್ಯೆ ಇದೆ. ಶಾಲೆ, ಕಾಲೇಜು, ಆಸ್ಪತ್ರೆ, ಗದ್ದೆಗಳಿಗೆ ಜನ ಹೋಗಿ ಬರುತ್ತಾರೆ. ಕೊಟ್ಟೂರು–ಹರಿಹರ ರೈಲು ಮಾರ್ಗದಲ್ಲಿ ಮೇಲಿಂದ ಮೇಲೆ ರೈಲುಗಳು ಸಂಚರಿಸುತ್ತವೆ. ಸಾರ್ವಜನಿಕರ ಅನುಕೂಲಕ್ಕಾಗಿ ಪಾದಚಾರಿ ಮೇಲ್ಸೇತುವೆ ಮತ್ತು ಲಘು ವಾಹನಗಳ ಸಂಚಾರಕ್ಕೆ ಅಂಡರ್‌ಪಾಸ್‌ ನಿರ್ಮಿಸಬೇಕು‘ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.