ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಲಾಶಯದ ಹೂಳು ತೆಗೆಸಿ’

Last Updated 17 ಆಗಸ್ಟ್ 2021, 12:58 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಗೊಂಡಿರುವ ಹೂಳು ತೆಗೆಸಬೇಕು’ ಎಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಆಗ್ರಹಿಸಿದರು.

ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ಮನವಿ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.

‘ಜಲಾಶಯ ನಿರ್ಮಾಣವಾಗಿ 77 ವರ್ಷಗಳಾಗಿವೆ. 133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 30 ಟಿಎಂಸಿ ಅಡಿಗೂ ಅಧಿಕ ಹೂಳು ತುಂಬಿಕೊಂಡಿದೆ. ನೀರಿನ ಸಂಗ್ರಹ ಸಾಮರ್ಥ್ಯ ಕುಸಿದಿರುವ ಕಾರಣ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ’ ಎಂದರು.

‘2017ರಲ್ಲಿ ಸಂಘದಿಂದ ಏರ್ಪಡಿಸಿದ್ದ ಹೂಳಿನ ಜಾತ್ರೆಗೆ ಬಂದು ವಾಸ್ತವ ಪರಿಸ್ಥಿತಿ ಅರಿತಿದ್ದೀರಿ. ರಾಜ್ಯದ ಹಿರಿಯ ನೀರಾವರಿ ತಜ್ಞರು, ಎಂಜಿನಿಯರ್‌ಗಳೊಂದಿಗೆ ಸಭೆ ನಡೆಸಿ, ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT