ಸೋಮವಾರ, ಜೂನ್ 21, 2021
29 °C

ವಿಶೇಷ ಪ್ಯಾಕೇಜ್‌ ಘೋಷಣೆಗೆ ಆಗ್ರಹ: ಈಡಿಗರ ಮಂಜುನಾಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ(ವಿಜಯನಗರ): ‘ರಾಜ್ಯದ ಜನತೆಗೆ ಅಗತ್ಯ ವಿಶೇಷ ಪ್ಯಾಕೇಜ್ ಘೋಷಿಸಬೇಕು. ನಿಷೇಧಾಜ್ಞೆ ಘೋಷಿಸಿರುವುದರಿಂದ ಅವರು ಸಂಕಷ್ಟಕ್ಕೆ ಒಳಗಾಗಿದ್ದು, ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ’ ಎಂದು ಡಿವೈಎಫ್ಐ ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ ಆಗ್ರಹಿಸಿದ್ದಾರೆ.

‘ಕೊರೊನಾ ಸೋಂಕು ಹರಡದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿವೆ. ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರೂ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ. ಅದರ ಬೆಲೆ ಜನಸಾಮಾನ್ಯರು ತೆರಬೇಕಾಗುತ್ತಿದೆ’ ಎಂದು ಹೇಳಿದ್ದಾರೆ.

‘ರೈತರಿಗೆ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಮದುವೆ ಸೇರಿದಂತೆ ಇತರೆ ಸಮಾರಂಭ ನಡೆಸಲು ಆಗುತ್ತಿಲ್ಲ. ಅನೇಕರು ಬ್ಯಾಂಕುಗಳಲ್ಲಿ ಸಾಲದ ಸುಳಿಗೆ ಸಿಲುಕಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದರಿಂದ ಮತ್ತಷ್ಟು ತೊಂದರೆಗೆ ಒಳಗಾಗಿದ್ದಾರೆ. ವಿಶೇಷ ಪ್ಯಾಕೇಜ್‌ ಮೂಲಕ ಸರ್ಕಾರ ನೆರವಿಗೆ ಬರಬೇಕು’ ಎಂದು ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು