ಭಾನುವಾರ, ಮಾರ್ಚ್ 7, 2021
19 °C

ಮೊರಾರ್ಜಿ ಶಾಲೆಯಲ್ಲಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ತಾಲ್ಲೂಕಿನ ಕಾಳಘಟ್ಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸ್ವಂತ ಕಟ್ಟಡ ನಿರ್ಮಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌.ಎಫ್‌.ಐ.) ಕಾರ್ಯಕರ್ತರು ಬುಧವಾರ ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ನಂತರ ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಶಾಲೆ ಕಾಳಘಟ್ಟಕ್ಕೆ ಮಂಜೂರಾಗಿದೆ. ಹೀಗಿದ್ದರೂ ತಿಮ್ಮಲಾಪುರಕ್ಕೆ ಸ್ಥಳಾಂತರ ಮಾಡಲಾಗಿದೆ. 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ, ಅಲ್ಲಿ ಸೂಕ್ತ ಕೊಠಡಿಗಳ ವ್ಯವಸ್ಥೆ ಇಲ್ಲ. ಶುದ್ಧ ಕುಡಿಯುವ ನೀರಿಲ್ಲ. ಗುಣಮಟ್ಟದ ಆಹಾರ ಕೊಡುತ್ತಿಲ್ಲ. ವಿದ್ಯಾರ್ಥಿಗಳು ರೋಗ–ರುಜಿನಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿಗಳು ಪ್ರಾಚಾರ್ಯರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ಮನವಿಯಲ್ಲಿ ದೂರಿದ್ದಾರೆ.

‘ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾಳಘಟ್ಟದಲ್ಲೇ ವಸತಿ ಶಾಲೆಯ ಸ್ವಂತ ಕಟ್ಟಡ ನಿರ್ಮಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಕಿಟ್‌ ವಿತರಿಸಬೇಕು. ವಿದ್ಯಾರ್ಥಿಗಳಿಗೆ ಪೌಷ್ಟಿಕವಾದ ಗುಣಮಟ್ಟದ ಆಹಾರ ಪೂರೈಸಬೇಕು. ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ. 

ಫೆಡರೇಷನ್‌ ಅಧ್ಯಕ್ಷ ಶರಣು ವಡ್ಡು, ಕಾರ್ಯದರ್ಶಿ ಜೆ. ಶಿವಕುಮಾರ, ಉಪಾಧ್ಯಕ್ಷ ರಮೇಶ, ಮುಖಂಡರಾದ ಮೌನೇಶ, ಶ್ರೀಪಾದ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.