ಗುಣಮಟ್ಟದ ಶಿಕ್ಷಣಕ್ಕೆ ಸಹಿ ಸಂಗ್ರಹ ಅಭಿಯಾನ

7

ಗುಣಮಟ್ಟದ ಶಿಕ್ಷಣಕ್ಕೆ ಸಹಿ ಸಂಗ್ರಹ ಅಭಿಯಾನ

Published:
Updated:
Deccan Herald

ಹೊಸಪೇಟೆ: ‘ಸದೃಢ ದೇಶ ನಿರ್ಮಾಣಕ್ಕಾಗಿ ಗುಣಮಟ್ಟದ ಉನ್ನತ ಶಿಕ್ಷಣ’ ಶೀರ್ಷಿಕೆ ಅಡಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯು (ಕೆ.ವಿ.ಎಸ್‌.) ಗುರುವಾರ ನಗರದ ಶಂಕರ್‌ ಆನಂದ್‌ ಸಿಂಗ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿತ್ತು.

ಕಾಲೇಜಿನ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಸಹಿ ಮಾಡಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಸಂಘಟನೆಯ ಮುಖ್ಯಸ್ಥೆ ದೀಪಿಕಾ ಮಾತನಾಡಿ, ‘ಭಾರತ ಬಿಟ್ಟು ತೊಲಗಿ ಚಳವಳಿ ನಡೆದ ದಿನದಂದೇ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದರ ಮುಖ್ಯ ಉದ್ದೇಶ ಸದೃಢ ರಾಷ್ಟ್ರ ನಿರ್ಮಾಣವಾಗಬೇಕಾದರೆ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಎನ್ನುವುದು. ಗುಣಮಟ್ಟದ ಶಿಕ್ಷಣ ಕೊಟ್ಟರೆ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡಿ ದೇಶ ಕಟ್ಟುವ ಕೆಲಸ ಮಾಡಬಹುದು’ ಎಂದು ಹೇಳಿದರು.

‘ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ ಪ್ರಮುಖವಾದುದು. ಆದರೆ, ಅವುಗಳನ್ನೇ ಸರ್ಕಾರ ನಿರ್ಲಕ್ಷಿಸುತ್ತಿದೆ. ಸರ್ಕಾರ ತನ್ನ ನೀತಿ ಬದಲಿಸಿಕೊಂಡು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಬೇಕು’ ಎಂದು ಹೇಳಿದರು.

ಸಂಘಟನೆಯ ರೆಹಮಾನ್‌, ಸಚಿನ್‌, ಶಿವಲೀಲಾ, ರವಿ, ಹನುಮ ನಾಯ್ಕ, ಅಲ್ತಾಫ್‌, ಗೋಪಿ, ಗಿರೀಶ್‌, ನಯನಾ, ದಾದಾಪೀರ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !