ಭಾನುವಾರ, ಜನವರಿ 24, 2021
21 °C

ಕಳಪೆ ಬೀಜ ಮಾರಿದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಕಳಪೆ ಮೆಣಸಿನಕಾಯಿ ಬೀಜ ಮಾರಾಟ ಮಾಡಿ ರೈತರಿಗೆ ವಂಚಿಸಿರುವ ಕಂಪನಿ ವಿರುದ್ಧ ಕ್ರಮ ಜರುಗಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ರೈತರು ಈ ಸಂಬಂಧ ಸೋಮವಾರ ಇಲ್ಲಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕಳಪೆ ಬೀಜದಿಂದ ಮೆಣಸಿನಕಾಯಿ ಇಳುವರಿ ಬಂದಿಲ್ಲ. ನೂರಾರು ಎಕರೆಯಲ್ಲಿ ಬೆಳೆ ಬೆಳೆದಿದ್ದ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ತಾಲ್ಲೂಕಿನ ಬೈಲುವದ್ದಿಗೇರಿ, ಕಾಕುಬಾಳು, ಜೋಗ ಸೇರಿದಂತೆ ಹಲವು ರೈತರು ಕಂಪನಿಯ ಮೋಸಕ್ಕೆ ಒಳಗಾಗಿ ಕೈ ಸುಟ್ಟುಕೊಂಡಿದ್ದಾರೆ. ಬೀಜ ಮಾರಾಟ ಮಾಡಿದ ಕಂಪನಿ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖಂಡರಾದ ಮರಡಿ ಜಂಬಯ್ಯ ನಾಯಕ, ಆರ್‌. ಭಾಸ್ಕರ್‌ ರೆಡ್ಡಿ, ಜೆ.ಎಂ. ಚನ್ನಬಸವಯ್ಯ, ಎಸ್‌. ಶರಭಣ್ಣ ಜೋಗ, ಅಮ್ರಾಪುರ ವೀರೇಶ, ವೀರನಗೌಡ ರುದ್ರಗೌಡ, ಕಾಗೇರು ಚನ್ನವೀರಪ್ಪ, ಅಯ್ಯನಗೌಡ, ವೀರಭದ್ರಗೌಡ, ಪೂಜೆರು ಮಾರಪ್ಪ, ಎನ್‌. ಪ್ರಕಾಶ್‌, ಎಚ್‌. ಗವಿಸಿದ್ದಪ್ಪ ಮನವಿಗೆ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.