ಸೋಮವಾರ, ಆಗಸ್ಟ್ 15, 2022
23 °C

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್‌ ಜಾರಿಗೆ ಆಗ್ರಹಿಸಿ ವಿಜಯನಗರ ಮಾದಿಗ ಸಮಾಜ ಸಂಘಟನೆಯವರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

‘ಒಳಮೀಸಲಾತಿ ಜಾರಿಗೆ ತರುವುದರ ಬಗ್ಗೆ ಮರು ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ ಹೇಳಿದೆ. ಹಾಗಾಗಿ ರಾಜ್ಯ ಸರ್ಕಾರ ಆಯೋಗದ ವರದಿಯನ್ನು ಒಪ್ಪಿಕೊಂಡು, ವಿಧಾನಸಭೆಯಲ್ಲಿ ಮಂಡಿಸಿ ಒಳಮೀಸಲಾತಿಗೆ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಜಗದೀಶ್‌ ಶೆಟ್ಟರ್‌ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಜಾರಿಗೆ ತರುವುದಾಗಿ ಹುಬ್ಬಳ್ಳಿಯಲ್ಲಿ ಮಾದಿಗ ಸಮಾಜದ ಸಮಾವೇಶದಲ್ಲಿ ಭರವಸೆ ನೀಡಿದ್ದರು. ಈಗ ಅವರದೇ ಸರ್ಕಾರ ಇದ್ದು, ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಎಂ.ಸಿ.ವೀರಸ್ವಾಮಿ, ಬಿ.ಮಾರೆಣ್ಣ, ಗೋವಿಂದಪ್ಪ, ಎಸ್‌. ಯರಿಸ್ವಾಮಿ, ಇ.ಶೇಕ್ಷಾವಲಿ, ರಾಮಚಂದ್ರ, ಶೇಷು, ನಿಂಬಗಲ್ ರಾಮಕೃಷ್ಣ, ಆರ್‌.ಸಿ. ಭರತ್‍ಕುಮಾರ್, ಎಚ್‌.ಬಿ. ಶ್ರೀನಿವಾಸ, ವಿಜಯಕುಮಾರ್, ಲಕ್ಷ್ಮೀದೇವಿ, ಮಂಜುನಾಥ, ಓಬಳೇಶ್, ತಿರುಮಲೇಶ, ಪಂಪಾಪತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.