ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಸಹಾಯ ಧನ ಪಾವತಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಆಗ್ರಹ

Last Updated 7 ಜನವರಿ 2022, 13:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): 2018–19ನೇ ಸಾಲಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 36 ತಿಂಗಳ ಮಾಸಿಕ ಸಹಾಯ ಧನ ಬಿಡುಗಡೆಗೊಳಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಆಗ್ರಹಿಸಿದೆ.

ಈ ಸಂಬಂಧ ಶುಕ್ರವಾರ ಎಸ್‌ಎಫ್‌ಐ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ್‌ ಮ್ಯಾಗಳಮನಿ, ಸಹ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ್‌ ಅವರು ಕುಲಪತಿ ಪ್ರೊ. ಸ.ಚಿ. ರಮೇಶ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಆನ್‌ಲೈನ್‌ ಮೂಲಕ ಸಹಾಯ ಧನ ನೀಡಬೇಕು. ಸಹಾಯ ಧನ ₹25,000ಕ್ಕೆ ಹೆಚ್ಚಿಸಬೇಕು. ಸಾವಿತ್ರಿಬಾಯಿ ಫುಲೆ ವಸತಿ ನಿಲಯ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸಬೇಕು. ಬಾಂಡ್‌ ಪದ್ಧತಿ ಕೈಬಿಡಬೇಕು. ಫೆಲೋಶಿಪ್‌ ನೀಡಬೇಕು. ಲ್ಯಾಪ್‌ಟಾಪ್‌ ಕೊಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT