ಶನಿವಾರ, ಡಿಸೆಂಬರ್ 7, 2019
25 °C

ಮೊಬೈಲ್‌ ಟವರ್‌ ತೆರವಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಮೊಬೈಲ್‌ ಟವರ್‌ನಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದ್ದು, ಕೂಡಲೇ ಅದನ್ನು ತೆರವುಗೊಳಿಸಬೇಕೆಂದು ಇಲ್ಲಿನ ಎಂ.ಪಿ. ಪ್ರಕಾಶ ನಗರ, ಶಂಕರ್‌ ಕಾಲೊನಿ ಹಾಗೂ ನೆಹರೂ ಕಾಲೊನಿಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಸಂಬಂಧ ಮಂಗಳವಾರ ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ. 

‘ಮೊಬೈಲ್‌ ಟವರ್‌ನ ತರಂಗಗಳಿಂದ ಸುತ್ತಮುತ್ತಲಿನ ಜನರಲ್ಲಿ ಪಾರ್ಶ್ವವಾಯು, ಮೈಗ್ರೇನ್‌, ಉಸಿರಾಟದಂತಹ ಸಮಸ್ಯೆಗಳು ಕಾಣಿಸಿಕೊಂಡಿವೆ. ಮಕ್ಕಳ ಬೆಳವಣಿಗೆಗೂ ಅಡ್ಡಿಯಾಗುತ್ತಿದೆ. ಅಲ್ಲದೇ ಟವರ್‌ ಮೇಲೆ ಕೋತಿಗಳು ವಾಸವಾಗಿದ್ದು, ಸುತ್ತಮುತ್ತ ಓಡಾಡಿಕೊಂಡು ಜನರ ನೆಮ್ಮದಿ ಹಾಳು ಮಾಡಿವೆ’ ಎಂದು ಗೋಳು ತೋಡಿಕೊಂಡಿದ್ದಾರೆ.

‘ಕಾಲೊನಿಗಳಲ್ಲಿ ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಹಂದಿಗಳು ಬೇಕಾಬಿಟ್ಟಿ ಓಡಾಡಿಕೊಂಡಿವೆ. ಅವುಗಳ ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರತಿಕ್ರಿಯಿಸಿ (+)