ಸೋಮವಾರ, ಸೆಪ್ಟೆಂಬರ್ 20, 2021
28 °C

‘ಶಿಕ್ಷಕರ ಸಂಘದಲ್ಲಿ ಮಹಿಳೆಯರಿಗೆ ಮೀಸಲು ಸಿಗಲಿ: ಶಿಕ್ಷಕಿಯರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲು ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಆಗ್ರಹಿಸಿದೆ.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಗುರುವಾರ ನಗರದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಅವರಿಗೆ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.

ನೌಕರರ ಸಂಘವನ್ನು ಹುಟ್ಟು ಹಾಕಿದ್ದೆ ಮಹಿಳೆ. ರಾಜ್ಯದಲ್ಲಿ ಸರ್ಕಾರಿ ನೌಕರಿಗಳಲ್ಲಿ ಹೆಚ್ಚಿನ ಮಹಿಳೆಯರು ಇದ್ದಾರೆ. ಪ್ರಾಥಮಿಕ, ಪ್ರೌಢಶಾಲೆಗಳಲ್ಲಂತೂ ಈ ಸಂಖ್ಯೆ ಬಹಳಷ್ಟಿದೆ. ನೌಕರರ ಸಂಘದ ಶ್ರೇಯೋಭಿವೃದ್ಧಿಯಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಹಾಗಾಗಿ ಶೇ 33ರಷ್ಟು ಮೀಸಲಾತಿ ಕಲ್ಪಿಸಿದರೆ ಇನ್ನಷ್ಟು ಶ್ರಮಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಮಹಿಳೆಯರಿಗೆ ಶೇ 33ರಷ್ಟು ಮೀಸಲು ಕಲ್ಪಿಸಿ ಹೊಸ ಇತಿಹಾಸ ಬರೆಯಬೇಕು. ಈ ಮೂಲಕ ನೌಕರರ ಸಂಘ ಮುನ್ನುಡಿ ಬರೆಯಬೇಕು ಎಂದು ಆಗ್ರಹಿಸಿದ್ದಾರೆ. ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷೆ ಕೆ. ರೇಷ್ಮಾ, ರೂಪಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.