ಅಂಗವಿಕಲರಿಂದ ಮತದಾನ ಜಾಗೃತಿ

ಶನಿವಾರ, ಏಪ್ರಿಲ್ 20, 2019
29 °C

ಅಂಗವಿಕಲರಿಂದ ಮತದಾನ ಜಾಗೃತಿ

Published:
Updated:
Prajavani

ಹೊಸಪೇಟೆ: ಲೋಕಸಭೆ ಚುನಾವಣೆ ಪ್ರಯುಕ್ತ ಅಂಗವಿಕಲರು ಮೂರು ಚಕ್ರದ ವಾಹನದಲ್ಲಿ ಮಂಗಳವಾರ ಸಂಜೆ ನಗರದಲ್ಲಿ ಮತದಾನ ಜಾಗೃತಿ ರ್‍ಯಾಲಿ ನಡೆಸಿದರು.

ನಗರಸಭೆ ಆವರಣದಿಂದ ಆರಂಭಗೊಂಡ ಜಾಥಾ ಮೂರಂಗಡಿ ವೃತ್ತ, ಮಹಾತ್ಮ ಗಾಂಧಿ ವೃತ್ತ, ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ, ರೋಟರಿ ವೃತ್ತದ ಮೂಲಕ ಹಾದು ಮುನ್ಸಿಪಲ್‌ ಮೈದಾನದಲ್ಲಿ ಕೊನೆಗೊಂಡಿತು. ಮತದಾನ ಜಾಗೃತಿ ಕುರಿತ ಫಲಕಗಳು, ತಮಟೆ ಬಾರಿಸುತ್ತ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.

ಇದಕ್ಕೂ ಮುನ್ನ ಜಾಥಾಕ್ಕೆ ಚಾಲನೆ ನೀಡಿದ ನಗರಸಭೆ ಪೌರಾಯುಕ್ತ ವಿ. ರಮೇಶ, ‘ಮತದಾನ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಜನಪರ ಧೋರಣೆ ಮತ್ತು ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಅಭ್ಯರ್ಥಿಗೆ ಮತ ಹಾಕಬೇಕು. ಐದು ವರ್ಷಕ್ಕೊಮ್ಮೆ ಬರುವ ಮತದಾನ ಪ್ರಕ್ರಿಯೆಯಿಂದ ಯಾರೂ ದೂರ ಉಳಿಯಬಾರದು. ಅಮೂಲ್ಯವಾದ ಮತದಾನದ ಹಕ್ಕಿನಿಂದ ವಂಚಿತರಾಗಬಾರದು’ ಎಂದರು. 

ಜಾಥಾದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸೈಯದ್ ಮನ್ಸೂರ್ ಅಹಮ್ಮದ್‌, ರವಿಕುಮಾರ ನಾಯಕ ಇದ್ದರು. ಅಂಗವಿಕಲರ ಸಂಘ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿಯಾಗಿ ಜಾಥಾ ಆಯೋಜಿಸಿದ್ದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !