ಶುಕ್ರವಾರ, ಅಕ್ಟೋಬರ್ 30, 2020
25 °C

ಡಣಾಪುರ: ಅಂಗವಿಕಲರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಅಂಗವಿಕಲರಿಗೆ ಆರ್ಥಿಕ ಪುನಶ್ಚೇತನ ಯೋಜನೆ ರೂಪಿಸುವಂತೆ ಆಗ್ರಹಿಸಿ ‘ತಾಲ್ಲೂಕು ವಿಕಲಚೇತನರ ಸಂಘ’ದವರು ಗುರುವಾರ ತಾಲ್ಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ‘ಅಂಗವಿಕಲರಿಗೆ ಮೀಸಲಿಟ್ಟಿರುವ ಶೇ 5ರಷ್ಟು ಅನುದಾನವನ್ನು ಅವರ ಕಲ್ಯಾಣಕ್ಕೆ ಬಳಸಬೇಕು. ಆದಷ್ಟು ಶೀಘ್ರ ಸಭೆ ಕರೆದು, ಅಂಗವಿಕಲರೊಂದಿಗೆ ಚರ್ಚಿಸಿ ಆ ಅನುದಾನ ಖರ್ಚು ಮಾಡಬೇಕು’ ಎಂದು ಒತ್ತಾಯಿಸಿದರು.

‘ಲಾಕ್‌ಡೌನ್‌ ನಂತರ ಅಂಗವಿಕಲರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ಮೀಸಲಿಟ್ಟಿರುವ ಹಣ ಬಳಸದೇ ಇರುವುದರಿಂದ ಮತ್ತಷ್ಟು ತೊಂದರೆಗೆ ಈಡಾಗಿದ್ದಾರೆ. ಜೀವನ ನಡೆಸುವುದು ದುಸ್ತರವಾಗಿದೆ. ಹಾಗಾಗಿ ಏಳು ದಿನಗಳ ಒಳಗೆ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಸಂಘದ ಅಧ್ಯಕ್ಷ ಕೆ.ಹುಲುಗಪ್ಪ, ಮುಖಂಡರಾದ ಪಿ.ಸಿ.ಶಾಂತ, ಶೇಕ್ ಮೆಹಬೂಬ್ ಬಾಷ, ಹುಲಿಗೆಮ್ಮ, ದೇವರಾಜ್, ರಮೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.