ಹೊಸಪೇಟೆ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ ಹೇಳಿಕೆ ಕುರಿತು ಪಕ್ಷದಲ್ಲಿ ಚರ್ಚಿಸಿ, ಶಿಸ್ತು ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಮಂಗಳವಾರ ಸಂಜೆ ನಗರದಲ್ಲಿ ಹಮ್ಮಿಕೊಂಡಿದ್ದ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಇನ್ನುಳಿದಿರುವ ಮೂರು ವರ್ಷಗಳವರೆಗೂ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಅದರ ಬಗ್ಗೆ ಯಾರಿಗೂ ಅನುಮಾನ ಬೇಡ’ ಎಂದು ಸ್ಪಷ್ಟಪಡಿಸಿದರು.

‘ಯಡಿಯೂರಪ್ಪ ಬಹಳ ದಿನ ಮುಖ್ಯಮಂತ್ರಿ ಆಗಿರುವುದಿಲ್ಲ. ಉತ್ತರ ಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ’ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಕೊಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.