ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗೇನಹಳ್ಳಿಯಲ್ಲಿ ಗುಡಿಸಲು ತೆರವಿಗೆ ವಿರೋಧ

Last Updated 20 ಸೆಪ್ಟೆಂಬರ್ 2021, 16:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ನಾಗೇನಹಳ್ಳಿಯಲ್ಲಿ 15 ವರ್ಷಗಳಿಂದ ನೆಲೆಸಿರುವ ಗೂಡಿಸಲು ವಾಸಿಗಳನ್ನು ತೆರವುಗೊಳಿಸುತ್ತಿರುವುದಕ್ಕೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ (ಡಿವೈಎಫ್‌ಐ) ವಿರೋಧ ವ್ಯಕ್ತಪಡಿಸಿದೆ.

ಪುನರ್ವಸತಿ ಕಲ್ಪಿತ ಮಾಜಿ ದೇವದಾಸಿಯರು, ಪರಿಶಿಷ್ಟರು, ಹಿಂದುಳಿದ ವರ್ಗದ ಬಡ, ಕೂಲಿ ಕಾರ್ಮಿಕರು ಸರ್ಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಾಗಿದ್ದಾರೆ. ಪಟ್ಟಾ ಕೊಡಬೇಕೆಂದು ಸತತವಾಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತ ಬಂದಿದ್ದಾರೆ. ಆದರೆ, ಅದಕ್ಕೆ ಕಿವಿಗೊಡದೆ ಈಗ ಏಕಾಏಕಿ ಜಿಲ್ಲಾಡಳಿತ ಅವರನ್ನು ತೆರವುಗೊಳಿಸಲು ಮುಂದಾಗಿರುವುದು ಖಂಡನಾರ್ಹ ಎಂದು ಸಂಘಟನೆಯ ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ ತಿಳಿಸಿದ್ದಾರೆ.

ಎಲ್ಲಾ ಗುಡಿಸಲು ವಾಸಿಗಳಿಗೆ ಹಕ್ಕು ಪತ್ರ ಕೊಡಬೇಕು. ಇಲ್ಲವಾದಲ್ಲಿ ಅನ್ಯ ಕಡೆ ನಿವೇಶನ ನೀಡಬೇಕು. ಇದ್ಯಾವುದೂ ಮಾಡದೆ ತೆರವುಗೊಳಿಸಲು ಮುಂದಾದರೆ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT