ಬುಧವಾರ, ಸೆಪ್ಟೆಂಬರ್ 23, 2020
27 °C

ರಂಗಭೂಮಿ ಕಲಾವಿದ ಕೋಗಳಿ ಪಂಪಣ್ಣ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಹಿರಿಯ ರಂಗಭೂಮಿ ಕಲಾವಿದ ಕೋಗಳಿ ಪಂಪಣ್ಣ (78) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕೋಗಳಿ ಪಂಪಣ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. 

ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಕೋಗಳಿ ಗ್ರಾಮದ ಪಂಪಣ್ಣ ಅವರು ರಂಗಭೂಮಿ ಕಲಾವಿದರಾಗಿದ್ದು, ಚಿಕ್ಕವಯಸ್ಸಿನಲ್ಲಿಯೇ ನಾಟಕಗಳಲ್ಲಿ ಅಭಿನಯಿಸುತ್ತಾ ರಾಷ್ಟ್ರ, ರಾಜ್ಯಮಟ್ಟದಲ್ಲಿ ಪ್ರದರ್ಶನಗಳನ್ನು ನೀಡಿದ್ದರು.

ರಕ್ತರಾತ್ರಿ, ಹೇಮರೆಡ್ಡಿ ಮಲ್ಲಮ್ಮ ಸೇರಿದಂತೆ ಹಲವು ಜನಪ್ರಿಯ ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ಹಲವು ನಾಟಕಗಳನ್ನು ರಚಿಸಿದ್ದಾರೆ. ಇವರಿಗೆ ನಾಟಕ ಅಕಾಡೆಮಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನಗಳು ಲಭಿಸಿವೆ. 2002ರ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದಾರೆ. ರಕ್ತರಾತ್ರಿ ನಾಟಕದಲ್ಲಿನ ಇವರ ಅಭಿನಯ ಎಲ್ಲರ ಮನಗೆದ್ದಿತ್ತು. ದೀರ್ಘಕಾಲ ನೆನಪಿನಲ್ಲಿ ಉಳಿಯುವಂತೆ ಮಾಡಿತು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು,  ಪುತ್ರಿ ಇದ್ದಾರೆ.  ಮೃತರ ಅಂತ್ಯ ಸಂಸ್ಕಾರ ಹುಟ್ಟೂರಾದ ಕೋಗಳಿ ಗ್ರಾಮದಲ್ಲಿ ನೆರವೇರಿಸಲಾಗುತ್ತದೆ ಎಂದು ಪಂಪಣ್ಣ ಅವರ ಸಂಬಂಧಿ ಲೋಕೋಪಯೋಗಿ ಇಲಾಖೆಯ ಹೊಸಪೇಟೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು