‘ಪ್ರಜಾವಾಣಿ ವರದಿ ಫಲಶ್ರುತಿ’: ವಸ್ತ್ರ ಸಂಹಿತೆಯ ಬ್ಯಾನರ್ ತೆರವು

ಹೊಸಪೇಟೆ: ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಾಕಿದ್ದ ವಸ್ತ್ರ ಸಂಹಿತೆಗೆ ಸಂಬಂಧಿಸಿದ ಬ್ಯಾನರ್ ಅನ್ನು ಧಾರ್ಮಿಕ ದತ್ತಿ ಇಲಾಖೆಯು ಶನಿವಾರ ತೆರವುಗೊಳಿಸಿದೆ.
‘ವಸ್ತ್ರ ಸಂಹಿತೆಗೆ ಗೊಂದಲ ಸೃಷ್ಟಿ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ಶನಿವಾರ (ಜ.9) ವರದಿ ಪ್ರಕಟಿಸಿತ್ತು. ವರದಿಗೆ ಎಚ್ಚೆತ್ತ ಧಾರ್ಮಿಕ ದತ್ತಿ ಇಲಾಖೆಯು ಆ ಬ್ಯಾನರ್ ತೆರವು ಮಾಡಿದೆ.
ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವುದರ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ವಿರೂಪಾಕ್ಷೇಶ್ವರ ದೇಗುಲದ ಪ್ರವೇಶ ದ್ವಾರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಗಮನಕ್ಕೆ ತರದೆ ಖಾಸಗಿಯವರು ವಸ್ತ್ರ ಸಂಹಿತೆಯ ಬ್ಯಾನರ್ ಹಾಕಿದ್ದರು. ಇದು ಭಕ್ತರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಚರ್ಚೆಗೂ ಇಂಬು ನೀಡಿತ್ತು. ಪತ್ರಿಕೆಯಲ್ಲಿ ಬಂದ ವರದಿ ಆಧರಿಸಿ ಶನಿವಾರ ಅದನ್ನು ತೆರವುಗೊಳಿಸಿ ಇಲಾಖೆಯು ಗೊಂದಲಕ್ಕೆ ಇತಿಶ್ರೀ ಹಾಡಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.