ಭಾನುವಾರ, ಏಪ್ರಿಲ್ 11, 2021
33 °C

ಭೂಸ್ವಾಧೀನ ಪ್ರಕರಣ: ನ್ಯಾಯಾಲಯದ ಆದೇಶಂತೆ ನೈರ್ಮಲ್ಯ ಇಲಾಖೆಯ ಚರ ವಸ್ತಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನ್ಯಾಯಾಲಯದ ಆದೇಶದ ಮೇರೆಗೆ ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಬಾಕಿ ಹಣ ಉಳಿಸಿಕೊಂಡಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಚರ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇಲಾಖೆಗೆ ಸೇರಿದ ನಗರದ ಉಪವಿಭಾಗ ಕಚೇರಿಯಲ್ಲಿದ್ದ ಮೂರು ಅಲ್ಮೇರಾ, ನಾಲ್ಕು ಕುರ್ಚಿಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಏನಿದು ಪ್ರಕರಣ?:
‘1996–97ರಲ್ಲಿ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯು ತಾಲ್ಲೂಕಿನ ಹಂಪಾದೇವನಹಳ್ಳಿ, ಜೌಕು ಪ್ರದೇಶದಲ್ಲಿ 22 ರೈತರಿಂದ ಜಮೀನು ಸ್ವಾಧೀನಕ್ಕೆ ತೆಗೆದುಕೊಂಡಿತು. ಆದರೆ, ರೈತರಿಗೆ ಕೊಡಬೇಕಾದ ಹಣ ಪಾವತಿಸಿರಲಿಲ್ಲ. ಈ ಕುರಿತು ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಆನಂದ ಚವ್ಹಾಣ ಅವರು, ಇಲಾಖೆಯ ಚರ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಡಿ. 9ರಂದು ಆದೇಶ ಹೊರಡಿಸಿದ್ದರು. ಅದರಂತೆ ಡಿ. 14ರಂದು ಅಲ್ಲಿರುವ ವಸ್ತುಗಳನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ’ ಎಂದು ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಗುರುಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು