ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತಪ್ಪಿದ ರೈಲು ದುರಂತ

ರೈಲ್ವೆ ಇಲಾಖೆಯ ಸಿಬ್ಬಂದಿಯ ನಿರ್ಲಕ್ಷ್ಯ
Last Updated 22 ಜನವರಿ 2019, 11:11 IST
ಅಕ್ಷರ ಗಾತ್ರ

ಹೊಸಪೇಟೆ: ಸ್ಥಳೀಯ ರೈಲ್ವೆ ಇಲಾಖೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಂಭವಿಸಬಹುದಾಗಿದ್ದ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.

‘ಜ.18ರಂದು ನಗರದ ರೈಲು ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ 4ರಲ್ಲಿ ಕಲ್ಲಿದ್ದಲು ಸಾಗಿಸುವ ಸರಕು ಸಾಗಣೆ ರೈಲು ನಿಂತಿತ್ತು. ಹೀಗಿದ್ದರೂ ಅದೇ ಮಾರ್ಗದ ಹಳಿ ಮೇಲೆ ಸಂಚರಿಸಲು ಇನ್ನೊಂದು ಸರಕು ಸಾಗಣೆ ರೈಲಿಗೆ ಸಿಗ್ನಲ್‌ ಕೊಡಲಾಗಿತ್ತು. ಆದರೆ, ಪ್ಲಾಟ್‌ಫಾರಂನಲ್ಲಿ ರೈಲು ನಿಂತಿದ್ದನ್ನು ಗಮನಿಸಿದ ಮತ್ತೊಂದು ರೈಲಿನ ಎಂಜಿನ್‌ ಚಾಲಕ ರೈಲಿಗೆ ಬ್ರೇಕ್‌ ಹಾಕಿ, ಸಂಭವಿಸಬಹುದಾಗಿದ್ದ ಅನಾಹುತವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿದ್ದಾರೆ’ ಎಂದು ಖಚಿತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಸುರಕ್ಷತಾ ಅಧಿಕಾರಿಗಳು ಮಂಗಳವಾರ ನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ವಿವರಣೆ ಪಡೆದುಕೊಂಡಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಈ ಕುರಿತು ರೈಲು ನಿಲ್ದಾಣದ ಅಧಿಕಾರಿ ಉಮರ್‌ ಬಾನಿ ಅವರನ್ನು ಸಂಪರ್ಕಿಸಿದಾಗ, ‘ಏನೂ ಆಗಿಲ್ಲ’ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT