ಶುಕ್ರವಾರ, ಫೆಬ್ರವರಿ 26, 2021
19 °C

ಅಖಿಲ ಭಾರತ ಪ್ರತಿಭಟನಾ ದಿನ: ಶಿಕ್ಷಣ ಖಾಸಗೀಕರಣದಿಂದ ಬಡ ಜನರ ಕೈಗೆಟಕುತ್ತಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಳ್ಳಾರಿ: ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೈಬಿಟ್ಟು, ಶಿಕ್ಷಣದ ಪ್ರಾಥಮಿಕ ಹಂತದಿಂದಲೇ ಉತ್ತೀರ್ಣ, ಅನುತ್ತೀರ್ಣ ಪದ್ದತಿ ಜಾರಿಗೊಳಿಸಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯ ಕಾರ್ಯಕರ್ತರು ಶಿಕ್ಷಣ ವಿರೋಧಿ ನೀತಿಗಳನ್ನು ವಿರೋದಿಸಿ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಮಂಗಳವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಧರಣಿ ನಡೆಸಿದರು.

ಸರ್ಕಾರಗಳು ಶಿಕ್ಷಣದ ಗುಣಮಟ್ಟ ಖಾತ್ರಿಪಡಿಸುವ ಕೆಲಸ ಮಾಡುತ್ತಿಲ್ಲ. ಖಾಸಗಿ ಶಾಲಾ -ಕಾಲೇಜುಗಳಿಗೆ ಅನುಮತಿ ನೀಡಿ ಲೂಟಿ ಹೊಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡದೆ, ಉತ್ತೀರ್ಣ, ಅನುತ್ತೀರ್ಣ ಪದ್ದತಿ ತೆಗೆದು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಸಿ.ಬಿ.ಸಿ.ಎಸ್ ಹಾಗೂ ಸೆಮಿಸ್ಟರ್ ಪದ್ದತಿಗಳನ್ನು ತಂದು ವಿದ್ಯಾರ್ಥಿಗಳ ಕ್ರಿಯಾಶೀಲತೆ ನಶಿಸುವಂತೆ ಮಾಡಿವೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ ಆಗ್ರಹಿಸಿದರು.

ಶಿಕ್ಷಣಕ್ಕೆ ಅವಶ್ಯವಾದ ಅನುದಾನ ನೀಡದೆ ಕಾಟಾಚಾರಕ್ಕೆ ಸರ್ಕಾರಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಪ್ರತಿ ಜಿಲ್ಲೆಗೊಂದು ಸರ್ಕಾರಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಸಾಧ್ಯವಾಗಿಲ್ಲ. ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಿ ಡೊನೇಷನ್ ಹೆಸರಿನಲ್ಲಿ ಹಗಲು ದರೋಡೆ ಮಾಡಲು ಬಿಟ್ಟಿವೆ. ಸರ್ಕಾರದ ನೀತಿಗಳು ಶಿಕ್ಷಣವನ್ನು ಬಡ ಜನರ ಕೈಗೆಟುಕದಂತಿವೆ ಮಾಡಿವೆ ಎಂದರು.

ಕೇಂದ್ರ ಸರ್ಕಾರ ವಿಶ್ವವಿದ್ಯಾಲಯ ಅನುದಾನ ಆಯೋಗವನ್ನು ತೆಗೆದು ಕಾರ್ಪೋರೇಟ್ ಕಾಲೇಜುಗಳಿಗೆ ಅನುಕೂಲವಾಗುವಂತೆ ಭಾರತದ ಉನ್ನತ ಶಿಕ್ಷಣ ಆಯೋಗವನ್ನು ಜಾರಿಗೆ ತರಲು ಮುಂದಾಗಿದೆ. ಅಲ್ಲದೆ ರಾಜ್ಯ ಸರ್ಕಾರ ಉಚಿತ ಬಸ್-ಪಾಸ್ ಕೊಡುತ್ತೇವೆಂದು ಹೇಳುತ್ತಿದೆಯೆ ಹೊರತು ಕೊಡಲು ಮುಂದಾಗಿಲ್ಲ ಎಂದು ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ಸುರೇಶ್ ಆಗ್ರಹಿಸಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ವಿ.ಎನ್,ಜಗದೀಶ್, ಜಂಟಿ ಕಾರ್ಯದರ್ಶಿ ಜೆ.ಪಿ.ರವಿಕಿರಣ್, ಸದಸ್ಯರಾದ ಗುರಳ್ಳಿ ರಾಜ, ಈರಣ್ಣ, ಮಂಜುನಾಥ್, ಶರಣಬಸವ ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು