ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

ಮಂಗಳವಾರ, ಏಪ್ರಿಲ್ 23, 2019
27 °C

ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

Published:
Updated:
Prajavani

ಬಳ್ಳಾರಿ: ಪ್ರತಿಯೊಬ್ಬರೂ ಏ.23ರಂದು ಮುಕ್ತವಾಗಿ ಧೈರ್ಯದಿಂದ ಮತಚಲಾಯಿಸಬೇಕು. ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾದ್ ಮನೋಹರ್ ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಗರದ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು. ಸರ್ಕಾರಿ ನೌಕರರು ಮತದಾನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಬೇಡಿ ಎಂದು ಹೇಳಿದರು.

ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಸಿ-ವಿಜಲ್ ಆ್ಯಪ್ ಮೂಲಕ ಪೋಟೊ ಮತ್ತು ವಿಡಿಯೋ ಹಾಕಿ ದೂರು ನೀಡಬಹುದು. ಮತದಾನಕ್ಕೆ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಎಲ್ಲರೂ ನಿರ್ಭಿತಿಯಿಂದ ಇದರಲ್ಲಿ ಭಾಗವಹಿಸಬೇಕು ಎಂದರು.‌

ಇದೇ ವೇಳೆ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಜಾಥಾ ಐಟಿಐ ಕಾಲೇಜಿನಿಂದ ಕೌಲ್‍ಬಜಾರ್ ಪೊಲೀಸ್ ಠಾಣೆ ಗಡಂಗ ಬೀದಿ, ಜಿಲ್ಲಾ ಕ್ರೀಡಾಂಗಣದ ಮೂಲಕ ಮರಳಿ ಕಾಲೇಜು ತಲುಪಿತು. ಜಾಥಾದಲ್ಲಿ ಮತದಾನ ಮಹತ್ವ ಸಾರುವ ಗೀತೆಗಳ ವಾಹನದೊಂದಿಗೆ ನಾಮಫಲಕಗಳನ್ನಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಇವಿಎಂ-ವಿವಿಪ್ಯಾಟ್‍ನ ಪ್ರಾತ್ಯೆಕ್ಷಿಕೆಯೂ ನಡೆಯಿತು.

ಪೂರ್ವ, ಪಶ್ಚಿಮ ವಲಯ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳ ಉಪನ್ಯಾಸಕರು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ, ಚುನಾವಣಾ ಆಯೋಗದ ರಾಯಭಾರಿ ಸುಭದ್ರಮ್ಮ ಮನ್ಸೂರ್, ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವರಾಜ ಹೆಡೆ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !