ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ನಗರಸಭೆ ಚುನಾವಣೆಗೆ ಮುಹೂರ್ತ ನಿಗದಿ

ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿದ ಬೆನ್ನಲ್ಲೇ ಚುನಾವಣೆ ಘೋಷಣೆ
Last Updated 29 ನವೆಂಬರ್ 2021, 14:24 IST
ಅಕ್ಷರ ಗಾತ್ರ

ಹೊಸಪೇಟೆ: ಎರಡೂವರೆ ವರ್ಷಗಳ ಕಾಯುವಿಕೆ ನಂತರ ಕೊನೆಗೂ ಇಲ್ಲಿನ ಹೊಸಪೇಟೆ ನಗರಸಭೆಯ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಡಿ. 27ರಂದು ನಗರಸಭೆಯ ಎಲ್ಲ 35 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ಡಿ. 8ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವರು. ಡಿ. 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಡಿ. 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ. 18ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅಗತ್ಯ ಬಿದ್ದಲ್ಲಿ ಡಿ. 29ರಂದು ಮರು ಮತದಾನ ನಡೆಸಲಾಗುತ್ತದೆ. ಡಿ. 30ರಂದು ಮತಗಳ ಎಣಿಕೆ ನಡೆಸಿ, ಫಲಿತಾಂಶ ಘೋಷಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.

ಇದುವರೆಗೆ ಚುನಾವಣೆ ನಡೆಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್‌ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್‌ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಅದರ ಬೆನ್ನಲ್ಲೇ ನ. 24ರಂದು ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದೆ.

2019ರ ಮಾರ್ಚ್‌ನಲ್ಲೇ ನಗರಸಭೆ ಅವಧಿ ಪೂರ್ಣಗೊಂಡಿತ್ತು. ಆದರೆ, ವಾರ್ಡ್‌ವಾರು ಮೀಸಲಾತಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕೆಲ ಸದಸ್ಯರು ನ್ಯಾಯಾಲಯದ ಮೊರೆ ಹೋಗಿದ್ದರು.

‘ಎರಡು ವರ್ಷಗಳಿಂದ ನಗರಸಭೆಯಲ್ಲಿ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿದೆ. ಆಯಾ ವಾರ್ಡ್‌ ಜನರು ಅವರ ಕುಂದುಕೊರತೆ ಹೇಳಿಕೊಳ್ಳಲು ವೇದಿಕೆ ಇಲ್ಲದಂತಾಗಿತ್ತು. ಬೇಗ ಚುನಾವಣೆ ನಡೆದು ಜನಪ್ರತಿನಿಧಿಗಳು ಆಯ್ಕೆಯಾದರೆ ಸಮಸ್ಯೆ ಬಗೆಹರಿದಂತಾಗುತ್ತದೆ. ಎಲ್ಲ ಕೆಲಸಗಳು ಬೇಗ ಆಗಬಹುದು. ಚುನಾವಣೆ ಘೋಷಿಸುರುವುದು ಖುಷಿಯ ವಿಚಾರ’ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT