ಭಾನುವಾರ, ಫೆಬ್ರವರಿ 23, 2020
19 °C

ಸಹಕಾರಿಗಳಿಗೆ ಚುನಾವಣಾ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಸಹಕಾರ ಸಂಘಗಳ ಚುನಾವಣಾಧಿಕಾರಿಗಳು, ಕಾರ್ಯದರ್ಶಿಗಳಿಗೆ ಶುಕ್ರವಾರ ನಗರದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೆ. ತಿಪ್ಪೇಸ್ವಾಮಿ ಉದ್ಘಾಟಿಸಿ, ‘ತರಬೇತಿ ಪಡೆದವರು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಶ್ರಮಿಸಬೇಕು. ನಗರ ಸೇರಿದಂತೆ ಸಂಡೂರು, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಕಂಪ್ಲಿಯಲ್ಲಿ ಚುನಾವಣೆಯಲ್ಲಿ ನಡೆಯಲಿದೆ’ ಎಂದರು.
ನಿವೃತ್ತ ಸಹಕಾರ ಸಂಘಗಳ ಜಂಟಿ ನಿಬಂಧಕ ಸಂತೋಷ ಕುಮಾರ್, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜೆ.ಎಂ.ಶಿವಪ್ರಸಾದ, ಬ್ಯಾಂಕಿನ ನಿರ್ದೇಶಕರಾದ ಎಲ್.ಎಸ್.ಆನಂದ, ಯೂನಿಯನ್‌ ನಿರ್ದೇಶಕ ಅಯ್ಯಾಳಿ ತಿಮ್ಮಪ್ಪ, ಕೆ.ಎಂ.ಗುರುರಾಜ, ಡಿ.ಎಚ್.ರಾಮಣ್ಣ, ಸಹಕಾರ ಸಂಘಗಳ ಉಪನಿಬಂಧಕ ಸುನಿತಾ ಸಿದ್ರಾಮ್, ಸಹಾಯಕ ನಿಬಂಧಕ ಲಿಯಾಕತ್ ಅಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)