ನೌಕರರ ಸಂಘದ ಫಲಿತಾಂಶ ಪ್ರಕಟ

ಸೋಮವಾರ, ಜೂನ್ 24, 2019
29 °C

ನೌಕರರ ಸಂಘದ ಫಲಿತಾಂಶ ಪ್ರಕಟ

Published:
Updated:

ಹೊಸಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕಕ್ಕೆ ಗುರುವಾರ ನಡೆದ ಚುನಾವಣೆ ಫಲಿತಾಂಶ ಸಂಜೆ ಹೊರಬಿದ್ದಿದೆ.

ಪ್ರಾಥಮಿಕ ಶಾಲೆ ವಿಭಾಗಕ್ಕೆ ಮೂವರು, ಆರೋಗ್ಯ ಇಲಾಖೆ ವಿಭಾಗಕ್ಕೆ ಇಬ್ಬರು ಹಾಗೂ ಸಹಕಾರ ಕ್ಷೇತ್ರದಿಂದ ಒಬ್ಬರು ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲೆ ವಿಭಾಗದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು ಎಂಟು ಜನ ಸ್ಪರ್ಧಿಸಿದ್ದರು. ಈ ಪೈಕಿ ಕೆ. ಬಸವರಾಜ, ಕಡ್ಲಿ ವೀರಭದ್ರೇಶ, ಎಸ್‌. ಬಸವರಾಜ ಹೆಚ್ಚು ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ.

’ಆರೋಗ್ಯ ಇಲಾಖೆಯ ಎರಡು ಸ್ಥಾನಗಳಿಗೆ ಮೂವರು ಸ್ಪರ್ಧಿಸಿದ್ದರು. ಅದರಲ್ಲಿ ಕಾಳಪ್ಪಗೌಡ, ಆರ್‌.ಎಚ್‌. ಲತಾ ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದ ಒಂದು ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದರು. ವಿ. ಲೀಲಾವತಿ ಪ್ರತಿಸ್ಪರ್ಧಿಗಿಂತ ಒಂದು ಮತ ಹೆಚ್ಚಿಗೆ ಪಡೆದು ಆಯ್ಕೆಗೊಂಡಿದ್ದಾರೆ. 29 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆದಿದ್ದರಿಂದ ಚುನಾವಣೆ ನಡೆಸಲಿಲ್ಲ‘ ಎಂದು ಚುನಾವಣಾಧಿಕಾರಿ ಎನ್‌. ಸುಧಾಕರ್‌ ’ಪ್ರಜಾವಾಣಿ‘ಗೆ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !