ಮಂಗಳವಾರ, ಡಿಸೆಂಬರ್ 1, 2020
19 °C

ಐದು ಸಾವಿರ ಜನರಿಗೆ ಉದ್ಯೋಗ: ಸಚಿವ ಎಸ್‌.ಟಿ. ಸೋಮಶೇಖರ್‌ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಸಹಕಾರ ಇಲಾಖೆಯಿಂದ ಮುಂಬರುವ ಆರು ತಿಂಗಳಲ್ಲಿ ಐದು ಸಾವಿರ ಜನರಿಗೆ ಉದ್ಯೋಗ ಕೊಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಭರವಸೆ ನೀಡಿದರು.

ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನಿಂದ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ 67ನೇ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ‘ಕೋವಿಡ್‌ ಲಾಕ್‌ಡೌನ್‌ನಿಂದ ಅನೇಕರು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಂತಹವರಿಗೆ  ಕರ್ನಾಟಕ ಹಾಲು ಮಹಾಮಂಡಳ, ಡಿಸಿಸಿ ಬ್ಯಾಂಕ್‌, ಸಹಕಾರ ಸಂಸ್ಥೆಗಳ ಮೂಲಕ ಉದ್ಯೋಗ ನೀಡಲಾಗುವುದು. ಬರುವ ಮೇ ಒಳಗೆ ಇಡೀ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.